ಬೆಳಗಾವಿ :ಜಿಲ್ಲೆಯಲ್ಲಿ ಜನರ ಸಹಕಾರ ಹಾಗೂ ಮಾರ್ಗಸೂಚಿಗಳ ಪಾಲನೆಯಿಂದಾಗಿ ಕೋವಿಡ್-19 ವೈರಾಣು ಹರಡುವಿಕೆ ಇಳಿಕೆಯಾಗಿದೆ.
ಮುಂದಿನ ದಿನಗಳಲ್ಲಿಯೂ ಕೋವಿಡ್-19 ವೈರಾಣು ಹರಡುವಿಕೆ ನಿಯಂತ್ರಣಕ್ಕಾಗಿ ಒಂದೇ ಸಮಯದಲ್ಲಿ ಸಾರ್ವಜನಿಕರ ಒಗ್ಗೂಡುವಿಕೆಯನ್ನು ಗರಿಷ್ಠ 400 ಜನರ ಪಾಲ್ಗೊಳ್ಳುವಿಕೆಗೆ ಸೀಮಿತಗೊಳಿಸಿ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಆದೇಶಿಸಿದ್ದಾರೆ.
ಜಿಲ್ಲೆಯ ಸಮಸ್ತ ಸಾರ್ವಜನಿಕರು, ಸಂಘ-ಸಂಸ್ಥೆಗಳು ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವ ಪೂರ್ವದಲ್ಲಿ ಬೆಳಗಾವಿ ನಗರ ಮಟ್ಟದಲ್ಲಿ ಪೊಲೀಸ್ ಆಯುಕ್ತರು, ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಉಪವಿಭಾಗದ ಕೇಂದ್ರ ಸ್ಥಾನದಲ್ಲಿ ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು.