ಬೆಳಗಾವಿ:ಮಹಾರಾಷ್ಟ್ರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರಜೆ ಘೋಷಿಸಲಾಗಿದೆ.
ಮಹಾಮಳೆ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಾಲೆಗಳಿಗೆ 3 ದಿನ ರಜೆ ಘೋಷಣೆ - chikkodi school
ಬಿಡದೇ ಸುರಿಯುತ್ತಿರುವ ಮಳೆ ಹಿನ್ನೆಲೆ ಇಂದಿನಿಂದ 3 ದಿನಗಳ ಕಾಲ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ
ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಅವರು ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿ ತಟದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಚಿಕ್ಕೋಡಿ, ರಾಯಭಾಗ, ಕಾಗವಾಡ, ಅಥಣಿ ತಾಲೂಕಿನ ಶಾಲೆಗಳಿಗೆ ಮೂರು ದಿನ ರಜೆ ಘೋಷಣೆ ಮಾಡಿ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.