ಬೆಳಗಾವಿ: ಕೊರೊನಾ ಭೀತಿ ನಡುವೆಯೂ ಇಲ್ಲಿನ ಎಪಿಎಂಸಿ ಆವರಣದ ತರಕಾರಿ ಮಾರುಕಟ್ಟೆಯಲ್ಲಿ ಅಧಿಕ ಜನ ಸೇರುತ್ತಿರುವುದರಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಮಾರುಕಟ್ಟೆಗಳಲ್ಲಿ ಜನಜಂಗುಳಿ ತಡೆಯಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಬೊಮ್ಮನಹಳ್ಳಿ - ಡಿಸಿ ಬೊಮ್ಮನಹಳ್ಳಿ ಹೇಳಿಕೆ
ಎಪಿಎಂಸಿ ಯಾರ್ಡ್‌ನಲ್ಲಿ ಬೇರೆ ಬೇರೆ ಕಡೆ ಮಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚನೆಯನ್ನೂ ನೀಡಲಾಗಿದೆ. ಜಿಲ್ಲೆಯ ರೈತರು ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಹೆಚ್ಚಿನ ಜನಸಂದಣಿ ಉಂಟಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಪಿಎಂಸಿ ಯಾರ್ಡ್‌ನಲ್ಲಿ ಬೇರೆ ಬೇರೆ ಕಡೆ ಮಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚನೆಯನ್ನೂ ನೀಡಲಾಗಿತ್ತು, ಜಿಲ್ಲೆಯ ರೈತರು ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಹೆಚ್ಚಿನ ಜನಸಂದಣಿ ಉಂಟಾಗುತ್ತಿದೆ. ಹಾಗಾಗಿ ರೈತರು ಆಯಾ ತಾಲೂಕಿನ ಎಪಿಎಂಸಿ ಅಥವಾ ಸ್ಥಳೀಯ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕು ಎಂದರು.
ಕೋವಿಡ್-19 ಹರಡದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಾಪ್ ಕಾಮ್ಸ್ ಹಾಗೂ ವರ್ತಕರ ಸಂಘದಿಂದ ತರಕಾರಿ ಮಾರಾಟಗಾರರಿಗೆ ಗಾಡಿ ವ್ಯವಸ್ಥೆ ಮಾಡಲಾಗಿದೆ. ಎಪಿಎಂಸಿ ಪ್ರಾಂಗಣದಿಂದ ತಳ್ಳುಗಾಡಿ ಸೇರಿದಂತೆ ಮತ್ತಿತರ ವಾಹನಗಳ ಮೂಲಕ ತಮ್ಮ ತಮ್ಮ ಬಡಾವಣೆಗೆ ಬರುವ ವ್ಯಾಪಾರಿಗಳಿಂದಲೇ ಸಾರ್ವಜನಿಕರು ತರಕಾರಿಗಳನ್ನು ಖರೀದಿಸಬೇಕು ಎಂದು ತಿಳಿಸಿದ್ದಾರೆ.