ಬೆಳಗಾವಿ: ಜಿಲ್ಲೆಯನ್ನು ಪೂರ್ತಿಯಾಗಿ ಲಾಕ್‌ಡೌನ್ ಮಾಡುವುದು ಬೇಡ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.
ಇಡೀ ಬೆಳಗಾವಿ ಜಿಲ್ಲೆ ಲಾಕ್‌ಡೌನ್ ಬೇಡ: ಸಿಎಂಗೆ ಡಿಸಿ ಹಿರೇಮಠ ಮನವಿ
ರಾಜ್ಯದಲ್ಲಿ ಕೊರೊನಾ ಸೋಂಕು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಹಿನ್ನೆಲೆ ಮತ್ತೊಮ್ಮೆ ಲಾಕ್‌ಡೌನ್ ಮಾಡುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಬೆಳಗಾವಿ ಜಿಲ್ಲೆಯನ್ನು ಪೂರ್ತಿಯಾಗಿ ಲಾಕ್‌ಡೌನ್ ಮಾಡುವುದು ಬೇಡ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಈಗಾಗಲೇ ಗೋಕಾಕ್, ಮೂಡಲಗಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ತಾಲೂಕಗಳ ಸೆಲ್ಫ್ ಲಾಕ್ಡೌನ್ಗೆ ನಿರ್ಧರಿಸಲಾಗಿದೆ. ಈ ಕಾರಣಕ್ಕೆ ಬೆಳಗಾವಿ ಇಡೀ ಜಿಲ್ಲೆ ಲಾಕ್‌ಡೌನ್ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ, ನಿಮ್ಮ ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವಂತೆ ಡಿಸಿ ಹಿರೇಮಠ ಅವರಿಗೆ ನಿರ್ದೇಶನ ನೀಡಿದರು ಎನ್ನಲಾಗಿದೆ.