ಕರ್ನಾಟಕ

karnataka

ETV Bharat / state

ಕೋವಿಡ್ ಲಸಿಕೆಯಿಂದ ಮರಣ ಪ್ರಮಾಣ ನಿಯಂತ್ರಣ ಸಾಧ್ಯ: ಬೆಳಗಾವಿ ಜಿಲ್ಲಾಧಿಕಾರಿ

ಕೊರೊನಾ ಪ್ರಕರಣಗಳ ನಿಯಂತ್ರಣ ಸಂಬಂಧ ಬೆಳಗಾವಿ ಡಿಸಿ ಎಂ.ಜಿ.ಹಿರೇಮಠ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ರು. ಇದೇ ವೇಳೆ ಕೋವಿಡ್​ ಲಸಿಕೆ ಮೂಲಕ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಕಡಿಮೆ ಮಾಡಬಹುದು ಎಂದು ಹಿರೇಮಠ ಹೇಳಿದ್ರು.

dc hirematt said kovid vaccine can  control death tolls
ಜಿಲ್ಲಾಧಿಕಾರಿ ಹಿರೇಮಠ ಸಭೆ

By

Published : Mar 16, 2021, 9:08 PM IST

ಬೆಳಗಾವಿ: ಲಸಿಕೆ ಪಡೆಯುವುದರಿಂದ ರೂಪಾಂತರಿ ಕೊರೊನಾದಿಂದ ಉದ್ಭವಿಸಬಹುದಾದ ಮರಣ ಪ್ರಮಾಣಗಳನ್ನು ನಿಯಂತ್ರಿಸುವುದು ಸಾಧ್ಯವಿದೆ. ಆದ್ದರಿಂದ ಎಲ್ಲರೂ ತಪ್ಪದೇ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಲಸಿಕಾಕರಣದ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚಿಸಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರ ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ನೆರೆಯ ಜಿಲ್ಲೆಗಳಿಂದ ಆಗಮಿಸುವ ಪ್ರಯಾಣಿಕರಿಗೆ ತಪಾಸಣೆಗೆ ಆದ್ಯತೆ ‌ನೀಡಬೇಕು. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟಿರುವವರು ನಾಲ್ಕು ಲಕ್ಷಕ್ಕೂ ಅಧಿಕ ಜನರಿದ್ದಾರೆ. ಅಂತವರನ್ನು ಗುರುತಿಸಿ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಲಸಿಕೆ‌ ನೀಡುವ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. 60 ವರ್ಷ ಮೇಲ್ಪಟ್ಟಿರುವವರಿಗೆ ಲಸಿಕೆ ನೀಡಲು ಸ್ಥಳೀಯ ಸಂಘ-ಸಂಸ್ಥೆಗಳ ನೆರವಿನೊಂದಿಗೆ ವಿಶೇಷ ಅಭಿಯಾನ ನಡೆಸಬೇಕು. ಸ್ಥಳೀಯವಾಗಿ ಲಭ್ಯವಿರುವ ಅನುದಾನ ಅಥವಾ ಸೌಲಭ್ಯಗಳನ್ನು ಬಳಸಿಕೊಂಡು ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಒಂದೆರಡು ದಿನಗಳಲ್ಲಿ ಲಸಿಕಾ ಅಭಿಯಾನದಲ್ಲಿ ಪ್ರಗತಿ ಸಾಧಿಸಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಇರುವ ಹಿರಿಯ ನಾಗರಿಕರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಬೇಕು ಎಂದು ಸೂಚನೆ ನೀಡಿದರು.

ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ ಮಾತನಾಡಿ, ಗ್ರಾಮಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಿರಿಯ‌ ನಾಗರಿಕರನ್ನು ಕರೆತಂದು ಲಸಿಕೆ ನೀಡುವುದು ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆಯ ಆಯುಕ್ತ ಜಗದೀಶ್, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಇದ್ದರು.

ABOUT THE AUTHOR

...view details