ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳು ನೀಡಿರುವ ಮೊಬೈಲ್ ಸಂಖ್ಯೆಗೆ ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ: ಬೆಳಗಾವಿ ಡಿಸಿ - ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಆಗಸ್ಟ್ 10ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ. ಪಾಲಕರು, ವಿದ್ಯಾರ್ಥಿಗಳು ಧೈರ್ಯದಿಂದ ಫಲಿತಾಂಶ ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

DC M.G.Hiremath press meet
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

By

Published : Aug 9, 2020, 11:32 PM IST

ಬೆಳಗಾವಿ:ಎಸ್ಸೆಸ್ಸೆಲ್ಸಿ ಫಲಿತಾಂಶ ಆ.10 ಮಧ್ಯಾಹ್ನ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ನೀಡಿರುವ ಮೊಬೈಲ್ ಸಂಖ್ಯೆಗಳಿಗೆ ಫಲಿತಾಂಶ ಬರಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಕೊರೊನಾ ಸೋಂಕಿನ ನಡುವೆಯೂ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 74,014 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು. ಪಾಲಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಮನೋಬಲ ತುಂಬುವ ಕೆಲಸ ಮಾಡಬೇಕು ಎಂದರು.

ಕೋವಿಡ್-19 ಸಂದರ್ಭದಲ್ಲಿ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿದ್ದೀರಿ. ಎಸ್ಸೆಸ್ಸೆಲ್ಸಿ ಫಲಿತಾಂಶವು ಸಂತಸದಾಯಕ ಹಾಗೂ ಉತ್ತಮವಾಗಿ ಬರುವ ನಿರೀಕ್ಷೆ ಇದೆ. ಫಲಿತಾಂಶದಲ್ಲಿ ವಿದ್ಯಾರ್ಥಿಗಳು ವಿಫಲಗೊಂಡಲ್ಲಿ ಧೃತಿಗೆಡದೇ, ಸಪ್ಟೆಂಬರ್​ದಲ್ಲಿ ಬರುವ ಪೂರಕ ಪರೀಕ್ಷೆಯನ್ನು ಎದುರಿಸಲು ತಯಾರಾಗಬೇಕು ಎಂದು ತಿಳಿಸಿದರು.

ಮಕ್ಕಳ ಕಲಿಕೆಯನ್ನು ಉತ್ತಮಪಡಿಸಲು ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸದಾ ತಮ್ಮೊಂದಿಗೆ ಇರಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಭರವಸೆ ನೀಡಿದರು.

ABOUT THE AUTHOR

...view details