ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಕೋವಿಡ್ ಮರಣ ಪ್ರಮಾಣ ಶೇ.0.23: ಜಿಲ್ಲಾಧಿಕಾರಿ - ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಎರಡನೇ ಅಲೆಯಲ್ಲಿ ಜಿಲ್ಲೆಯ ಪಾಸಿಟಿವಿಟಿ ರೇಟ್ ಶೇ 13.43ಕ್ಕೆ ತಲುಪಿದೆ. ಮರಣ ಪ್ರಮಾಣ ಶೇ.0.23ದಷ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ‌ಹೇಳಿದರು.

-belgavi
ಬೆಳಗಾವಿ

By

Published : May 17, 2021, 9:07 AM IST

ಬೆಳಗಾವಿ:ಕೋವಿಡ್ ಎರಡನೇ ಅಲೆಯಲ್ಲಿ ಜಿಲ್ಲೆಯ ಪಾಸಿಟಿವಿಟಿ ಪ್ರಮಾಣ ಶೇ.13.43ಕ್ಕೆ ತಲುಪಿದ್ದು, ಮರಣ ಪ್ರಮಾಣ ಶೇ.0.23ದಷ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ‌ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಆಕ್ಸಿಜನ್ ಬೆಡ್, ಸೌಲಭ್ಯಗಳ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದ್ದರೂ ಗುಣಮುಖರ ಸಂಖ್ಯೆಯೂ ಹೆಚ್ಚಿದೆ. ಎರಡನೇ ಅಲೆಯಲ್ಲಿ ಜಿಲ್ಲೆಯ ಪಾಸಿಟಿವಿಟಿ ರೇಟ್ ಶೇ 13.43ಕ್ಕೆ ತಲುಪಿದೆ. ಮರಣ ಪ್ರಮಾಣ ಶೇ.0.23ದಷ್ಟಿದೆ ಎಂದರು.

ಖಾಸಗಿ ಆಸ್ಪತ್ರೆಗಳಿಗೆ ಇದುವರೆಗೆ ರೆಮಿಡಿಸಿವಿರ್ 12,561 ವಯಲ್ಸ್, ಸರ್ಕಾರಿ ಆಸ್ಪತ್ರೆಗಳಿಗೆ 12,750 ವಯಲ್ಸ್ ನೀಡಲಾಗಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲಾಗುತ್ತಿದ್ದು, ರೆಮಿಡಿಸಿವಿರ್ ಸೋಂಕಿತರೆಲ್ಲರಿಗೂ ಅಗತ್ಯ ಎಂದು ತಿಳಿದುಕೊಳ್ಳಬಾರದು. ರೆಮಿಡಿಸಿವಿರ್ ಯಾರಿಗೆ ಅಗತ್ಯ ಎಂಬುದನ್ನು ವೈದ್ಯರೇ ನಿರ್ಧರಿಸಲಿದ್ದಾರೆ ಎಂದು ವಿವರಿಸಿದರು.

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನೆಯ 3 ಘಟಕಗಳಿವೆ. ಸದ್ಯ ಜಿಲ್ಲೆಗೆ 15 ಕೆಎಲ್ ಹಂಚಿಕೆ ಇತ್ತು. ಬೇಡಿಕೆಗೆ ಅನುಗುಣವಾಗಿ ಅದನ್ನು 22 ಕೆಎಲ್‍ಗೆ ಹೆಚ್ಚಿಸಲಾಗಿದೆ. ಅಗತ್ಯವುಳ್ಳವರಿಗೆ ಜಿಲ್ಲಾಡಳಿತದಿಂದಲೇ ಆಕ್ಸಿಜನ್ ಪೂರೈಸಲು ವ್ಯವಸ್ಥೆ ಮಾಡಲಾಗಿದೆ. ಐಎಂಎಯವರು ಆಕ್ಸಿಜನ್ ಪೂರೈಕೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಈವರೆಗೆ 18 ರಿಂದ 44 ವಯಸ್ಸಿನ 4,125 ಜನರಿಗೆ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ಮತ್ತು 45ರ ಮೇಲ್ಪಟ್ಟ ವಯಸ್ಸಿನವರಿಗೆ ಆದ್ಯತೆ ನೀಡಿ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ 25 ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಒಟ್ಟು 980 ಹಾಸಿಗೆ ಲಭ್ಯವಿದೆ. ಸರ್ಕಾರದ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ 320 ಹಾಸಿಗೆಗಳು ಲಭ್ಯ ಇವೆ. ಅಗತ್ಯವುಳ್ಳವರಿಗೆ ಆಕ್ಸಿಜನ್ ಪೂರೈಕೆ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ ಎಂದು ಡಿಸಿ ಹೇಳಿದರು.

ABOUT THE AUTHOR

...view details