ಕರ್ನಾಟಕ

karnataka

ETV Bharat / state

ಬೆಳಗಾವಿಯ ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನ ಬಂದ್: ಡಿಸಿ

ಕೊರೊನಾ, ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಹಾಗು ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಸಾರ್ವಜನಿಕ ದರ್ಶನ ನಿರ್ಬಂಧಿಸಲಾಗಿದೆ‌.

Savadatti Sri Yallamma temple
ಸವದತ್ತಿ ಶ್ರೀ ಯಲ್ಲಮ್ಮ ‌ದೇವಸ್ಥಾನ

By

Published : Jan 6, 2022, 8:59 PM IST

ಬೆಳಗಾವಿ: ಒಮಿಕ್ರಾನ್ ಸೋಂಕಿತ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೇಣುಕಾ ಯಲ್ಲಮ್ಮ ದೇವಸ್ಥಾನ, ರಾಯಬಾಗದ ಚಿಂಚಲಿ ಮಾಯಕ್ಕಾ ದೇವಸ್ಥಾನಗಳ‌ಲ್ಲಿ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕೊರೊನಾ, ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಹಾಗು ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಸಾರ್ವಜನಿಕ ದರ್ಶನ ನಿರ್ಬಂಧಿಸಲಾಗಿದೆ‌ ಎಂದು ತಿಳಿಸಿದ್ದಾರೆ.


ಗಡಿ ಜಿಲ್ಲೆ ಬೆಳಗಾವಿಯ ಹಲವು ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಮಹಾರಾಷ್ಟ್ರದಿಂದ ಗಣನೀಯ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತಾಧಿಗಳು ಆಗಮಿಸುತ್ತಾರೆ.

ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನದ ಬಣದ ಹುಣ್ಣಿಮೆ ಜಾತ್ರೆಗೆ ಸುಮಾರು 5ರಿಂದ 8 ಲಕ್ಷದವರೆಗೆ ಭಕ್ತಾದಿಗಳು ಸೇರುವ ನಿರೀಕ್ಷೆ ಇದೆ. ಹೀಗಾಗಿ, ಜನವರಿ 14ರಿಂದ 28ರವರೆಗೆ ಸವದತ್ತಿ ಯಲ್ಲಮ್ಮ‌ ದೇವಸ್ಥಾನ, ಜೋಗಳಭಾವಿ ಸತ್ತೆಮ್ಮ ದೇವಿಯ ದೇವಸ್ಥಾನ, ರಾಮದುರ್ಗ ತಾಲೂಕಿನ ಗೊಡಚಿ ವೀರಭದ್ರೇಶ್ವರ ದೇವಸ್ಥಾನ, ರಾಯಬಾಗದ ತಾಲೂಕಿನ‌ ಚಿಂಚಲಿ ಮಾಯಕ್ಕಾ ದೇವಸ್ಥಾನ ಸೇರಿದಂತೆ ಇತರೆ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿ: ಮನನೊಂದು ಮಠ ತೊರೆದ ಸ್ವಾಮೀಜಿ.. ಶ್ರೀಗಳ ಮನವೊಲಿಸಲು ಬಂದ ಭಕ್ತರ ದಂಡು

For All Latest Updates

TAGGED:

ABOUT THE AUTHOR

...view details