ಬೆಳಗಾವಿ: ಮಳೆ ಮತ್ತು ಪ್ರವಾಹದಿಂದ ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಮಾಹಿತಿಯನ್ನು ಸ್ಥಳೀಯ ಶಾಸಕರುಗಳ ಗಮನಕ್ಕೆ ತಂದು ಸೆ.22ರ ಒಳಗಾಗಿ ಕಾಮಗಾರಿ ಆರಂಭಿಸಬೇಕು ಎಂದು ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಸೆ. 22 ರೊಳಗೆ ರಸ್ತೆ, ಸೇತುವೆ ಕಾಮಗಾರಿ ಪ್ರಾರಂಭಿಸಿ: ಡಿಸಿಎಂ ಕಾರಜೋಳ ಆದೇಶ - dcm govind karjola meeting in belgavi
ಮಳೆ ಮತ್ತು ಪ್ರವಾಹದಿಂದ ಹಾನಿಯಾಗಿರುವ ಮೂಲಸೌಕರ್ಯಗಳನ್ನು ಸರಿಪಡಿಸುವ ಕಾಮಗಾರಿಗಳ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ಜೊತೆಗೆ ಸೆ. 22 ರ ಒಳಗಾಗಿ ಬೆಳಗಾವಿ ಮತ್ತು ಧಾರವಾಡ ವಲಯದ ರಸ್ತೆ ಹಾಗೂ ಸೇತುವೆಗಳ ಕಾಮಗಾರಿಗಳು ಪ್ರಾರಂಭಗೊಳ್ಳಬೇಕು ಎಂದು ಸೂಚಿಸಿದರು.
ಮಳೆ ಮತ್ತು ಪ್ರವಾಹದಿಂದ ಹಾನಿಯಾಗಿರುವ ಮೂಲಸೌಕರ್ಯಗಳನ್ನು ಸರಿಪಡಿಸುವ ಕಾಮಗಾರಿಗಳ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಇದಲ್ಲದೇ ಈವರೆಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು, ಇನ್ನು ಕೈಗೊಳ್ಳಬೇಕಿರುವ ಕೆಲಸಗಳು, ಭಾರಿ ಮಳೆಗೆ ಹದಗೆಟ್ಟಿರುವ ರಸ್ತೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಶಾಸಕ ಮಹಾಂತೇಶ ದೊಡ್ಡಗೌಡ್ರ, ಮುಖ್ಯ ಅಭಿಯಂತರ ಎಸ್.ಎಫ್. ಪಾಟೀಲ್ ಸೇರಿದಂತೆ ಗದಗ, ಬಾಗಲಕೋಟೆ, ಧಾರವಾಡ, ಹಾವೇರಿ, ಕಾರವಾರ ಹಾಗೂ ಶಿರಸಿ ವಿಭಾಗಗಳ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.