ಬೆಳಗಾವಿ: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆಯಿಂದ ಬೆಳಗಾವಿ ಉಸ್ತುವಾರಿ ಕಳೆದ ಎರಡೂವರೆ ತಿಂಗಳಿನಿಂದ ತೆರವಾಗಿತ್ತು. ಇದೀಗ ರಾಜ್ಯ ಸರ್ಕಾರ ಬೆಳಗಾವಿ ಉಸ್ತುವಾರಿ ಸಚಿವರನ್ನಾಗಿ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಳಗಾವಿ ಉಸ್ತುವಾರಿಯಾಗಿ ಡಿಸಿಎಂ ಗೋವಿಂದ ಕಾರಜೋಳ ನೇಮಕ ಇದನ್ನೂ ಓದಿ:ಬಿಜೆಪಿ ವತಿಯಿಂದ ಉಚಿತ ಆ್ಯಂಬುಲೆನ್ಸ್: ಸಚಿವ ಸುರೇಶ್ ಕುಮಾರ್ ಉದ್ಘಾಟನೆ
ಬೆಳಗಾವಿ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಉಮೇಶ ಕತ್ತಿ ಅವರನ್ನು ಬಾಗಲಕೋಟೆ ಉಸ್ತುವಾರಿ ಹೊಣೆ ವಹಿಸಲಾಗಿದೆ. ಇದಲ್ಲದೇ ಅರವಿಂದ್ ಲಿಂಬಾವಳಿ ಅವರನ್ನು ಬೀದರ್, ಎಂಟಿಬಿ ನಾಗರಾಜ ಅವರನ್ನು ಕೋಲಾರ, ಮುರುಗೇಶ ನಿರಾಣಿ ಅವರಿಗೆ ಕಲಬುರಗಿ ಹಾಗೂ ಎಸ್.ಅಂಗಾರ ಅವರಿಗೆ ಚಿಕ್ಕಮಗಳೂರು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.