ಬೆಳಗಾವಿ:ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಸಾಧನೆ ಮುಂದಿಟ್ಟುಕೊಂಡು ನಾವು ಬೆಳಗಾವಿಯಲ್ಲಿ ಪ್ರಚಾರ ಮಾಡಿ ಮಂಗಳಾ ಅಂಗಡಿ ಅವರನ್ನು ವಿಜಯಶಾಲಿಯನ್ನಾಗಿ ಮಾಡುತ್ತೇವೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಏ.17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿದ ಡಿಸಿಎಂ ಗೋವಿಂದ ಕಾರಜೋಳ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ದಿ.ಸುರೇಶ್ ಅಂಗಡಿ ಸರಳ, ಸಜ್ಜನ ರಾಜಕಾರಣಿಯಾಗಿದ್ರು. ಅವರು ಕಾರ್ಯರೂಪಕ್ಕೆ ತಂದಿರುವ ಯೋಜನೆಗಳನ್ನು ನೋಡಿ ಬೆಳಗಾವಿ ಜನತೆ ಮಂಗಳಾ ಅಂಗಡಿ ಅವರಿಗೆ ಮತ ಹಾಕುತ್ತಾರೆ. ಅನೇಕರು ಮರಾಠಿ ಜನ ಬಡವರಿದ್ದಾರೆ. ಅವರಿಗೂ ಸಹಾಯ ಸಿಗಬೇಕಿದೆ. ಇದಕ್ಕೆ ಸಹಾಯವಾಗಲೆಂದು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿದೆ. ಬೆಳಗಾವಿ, ಮಸ್ಕಿ, ಬಸವಕಲ್ಯಾಣದಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.