ಕರ್ನಾಟಕ

karnataka

ETV Bharat / state

ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್​ನಿಂದ ಸದನದಲ್ಲಿ ಸಿಡಿ ಬಗ್ಗೆ ಚರ್ಚೆ : ಲಕ್ಷ್ಮಣ ಸವದಿ - Lakshmana Savadi

ಬೆಳಗಾವಿ ಸೇರಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್ ಉಸ್ತುವಾರಿ ವಹಿಸಿಕೊಂಡಿದ್ದಾರೆ. ರಾಜ್ಯಮಟ್ಟದ ಇನ್ನಿತರ ನಾಯಕರು ಪ್ರಚಾರಕ್ಕೆ ಬರುತ್ತಾರೆ. ಮೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ..

DCM Lakshmana Savadi
ಡಿಸಿಎಂ ಲಕ್ಷ್ಮಣ ಸವದಿ

By

Published : Mar 26, 2021, 9:56 PM IST

ಬೆಳಗಾವಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒಳ್ಳೆಯ ಬಜೆಟ್ ನೀಡಿದ್ದರು. ನಮ್ಮ ಬಜೆಟ್ ಬಗ್ಗೆ ಟೀಕೆ ಮಾಡಲಾಗದ ಕಾರಣ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಸದನದಲ್ಲಿ ಸಿಡಿ ಬಗ್ಗೆ ಚರ್ಚೆ ಮಾಡುತ್ತಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷಗಳ ವಿರುದ್ಧ ಡಿಸಿಎಂ ಲಕ್ಷ್ಮಣ ಸವದಿ

ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ ಅನಾವಶ್ಯಕವಾಗಿ ಸಿಡಿ ವಿಷಯ ತೆಗೆದುಕೊಂಡು ಸದನ ನಡೆಯಲು ಅವಕಾಶ ಕೊಡಲಿಲ್ಲ. ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ರಾಸಲೀಲೆ ಸಿಡಿ ಪ್ರಕರಣ ಕುರಿತು ಸಂತ್ರಸ್ತೆ ದೂರು ನೀಡುತ್ತಿರುವ ಪ್ರಶ್ನೆಗೆ ಅದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಉಪಚುನಾವಣೆಯಲ್ಲಿ ವೈಯಕ್ತಿಕ ವಿಚಾರ ಯಾವುದೂ ಪರಿಗಣನೆಗೆ ಬರಲ್ಲ. ಉಪಚುನಾವಣೆ ಮೇಲೆ ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಪರಿಣಾಮ ಬೀರುವುದಿಲ್ಲ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಸಾಧನೆ ಮತ್ತು ನಮ್ಮ ಸಿದ್ಧಾಂತವನ್ನು ಜನರ ಮುಂದೆ ಇಡುತ್ತೇವೆ. ಬೆಳಗಾವಿ ಸೇರಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್ ಉಸ್ತುವಾರಿ ವಹಿಸಿಕೊಂಡಿದ್ದಾರೆ. ರಾಜ್ಯಮಟ್ಟದ ಇನ್ನಿತರ ನಾಯಕರು ಪ್ರಚಾರಕ್ಕೆ ಬರುತ್ತಾರೆ. ಮೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details