ಬೆಳಗಾವಿ:ಐತಿಹಾಸಿಕ ಕಿತ್ತೂರು ಉತ್ಸವವನ್ನು ಈ ಬಾರಿ ವಿಭಿನ್ನ ರೀತಿಯಲ್ಲಿ ಉದ್ಘಾಟನೆ ಮಾಡಲಾಯಿತು. ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸುವ ಉದ್ದೇಶದಿಂದ ಸಾಂಕೇತಿಕ ಮನೆ ನಿರ್ಮಾಣ ಮಾಡುವ ಮುಖಾಂತರ ಡಿಸಿಎಂ ಲಕ್ಷ್ಮಣ ಸವದಿ ಕಾರ್ಯಕ್ರಮ ಉದ್ಘಾಟಿಸಿದರು.
ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ವಿಭಿನ್ನವಾಗಿ ಚಾಲನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ - ಕಿತ್ತೂರು ಉತ್ಸವಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ
ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದ್ದಾರೆ.
ಕಿತ್ತೂರು ಉತ್ಸವ
ಕಿತ್ತೂರಿನ ಐತಿಹಾಸಿಕ ಕೋಟೆ ಆವರಣದಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿದರು.
ಭೀಕರ ಪ್ರವಾಹದಲ್ಲಿ ಮನೆ ಕಳೆದುಕೊಂಡಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವಾಗಲು ರಾಜ್ಯ ಸರ್ಕಾರ ಮನೆ ನಿರ್ಮಾಣ ಕಾರ್ಯ ಮಾಡುತ್ತಿದ್ದು, ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಇದೆ ಎಂಬ ಆತ್ಮ ಸ್ಥೈರ್ಯ ನೀಡುವ ನಿಟ್ಟಿನಲ್ಲಿ ಸಾಂಕೇತಿಕ ಮನೆ ನಿರ್ಮಾಣ ಮಾಡುವ ಮುಖಾಂತರ ಕಿತ್ತೂರು ಉತ್ಸವ ಪ್ರಾರಂಭವಾಯಿತು.