ಅಥಣಿ :ತಾಲೂಕಿನ ಕೋಕಟನೂರ ಮತ್ತು ಗದಗನ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡಿಸಿಎಂ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಇಂದು ವಿಕಾಸಸೌಧದ ಅವರ ಕಚೇರಿಯಲ್ಲಿ ಸಭೆ ನಡೆದಿದೆ.
ಈ ಸಭೆಯಲ್ಲಿ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಮತ್ತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಸಿ.ಸಿ. ಪಾಟೀಲ್ ಅವರು ಕೂಡ ಭಾಗವಹಿಸಿದ್ದರು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳು ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.