ಕರ್ನಾಟಕ

karnataka

ETV Bharat / state

ಶೀಘ್ರದಲ್ಲೇ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿಗೆ ಸೂಕ್ತ ಕ್ರಮ: ಡಿಸಿಎಂ ಲಕ್ಷ್ಮಣ ಸವದಿ - ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿ ಬಗ್ಗೆ ಡಿಸಿಎಂ ಪ್ರತಿಕ್ರಿಯೆ

ಸಾರಿಗೆ ಸಿಬ್ಬಂದಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

dcm laksman savadi reation about KSRTC employees salary issue
ಡಿಸಿಎಂ ಲಕ್ಷ್ಮಣ ಸವದಿ

By

Published : Nov 14, 2020, 5:26 PM IST

ಬೆಳಗಾವಿ: ಶೀಘ್ರದಲ್ಲಿ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಡಿಸಿಎಂ ಲಕ್ಷ್ಮಣ ಸವದಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 30 ಸಾವಿರ ಸಾರಿಗೆ ಸಿಬ್ಬಂದಿ ಇದ್ದಾರೆ. ಅವರಿಗೆ ಪ್ರತಿ ತಿಂಗಳು 325 ಕೋಟಿ ರೂ. ಸಂಬಳ ನೀಡಬೇಕಾಗುತ್ತದೆ. ಆದ್ರೆ ಕೊರೊನಾ ಬಂದ ಮೇಲೆ ಸಾರಿಗೆ ಇಲಾಖೆಗೆ ಅತಿ ಹೆಚ್ಚು ನಷ್ಟವಾಗಿದ್ದು, ದೇಶದಲ್ಲಿ ಲಾಕ್​​ಡೌನ್​​ ವೇಳೆ ಸಾರಿಗೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ತು. ಆಗ ಸರ್ಕಾರದಿಂದ ಹಣ ಪಡೆದುಕೊಂಡು ನಮ್ಮ ಇಲಾಖೆ ಸಿಬ್ಬಂದಿಗೆ ಎರಡು ತಿಂಗಳು ಸೇರಿ ಒಟ್ಟು ಆರು ತಿಂಗಳ ಸಂಬಳ ನೀಡಲಾಗಿದೆ‌.

ಸದ್ಯ ಲಾಕ್​ಡೌನ್​ ಅವಧಿ ಮುಗಿದರೂ ಸಾರ್ವಜನಿಕರು ಕಡಿಮೆ ಪ್ರಮಾಣದಲ್ಲಿ ಬಸ್ ಸಂಚಾರ ಮಾಡುತ್ತಿದ್ದಾರೆ. ಹೀಗಾಗಿ ಬಸ್​​ಗಳಿಂದ ಬರುವ ಆದಾಯ ಬರೀ ಡೀಸೆಲ್​ಗೆ ಸೀಮಿತವಾಗಿದೆ. ಇದರಿಂದಾಗಿ ಇಲಾಖೆ‌ ಸಿಬ್ಬಂದಿಗೆ ಸಂಬಳ ನೀಡುವುದು ಸ್ವಲ್ಪ ಮಟ್ಟಿಗೆ ವ್ಯತ್ಯಾಸವಾಗಿದೆ. ಆದ್ರೆ ಸಿಬ್ಬಂದಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದೇನೆ. ಸಿಬ್ಬಂದಿಗೆ ಸಂಬಳ ನೀಡಲು ಕ್ರಮ ಕೈಗೊಳ್ಳಲಾವುದು ಎಂದು ತಿಳಿಸಿದ್ರು.

ABOUT THE AUTHOR

...view details