ಅಥಣಿ: ರಾಜ್ಯದಲ್ಲಿ ಕೆಲವರು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ಕುರಿತ ಚರ್ಚೆ ಅನಗತ್ಯವಾಗಿದ್ದು ಸಿಎಂ ಬಿ.ಎಸ್. ಯಡಿಯೂರಪ್ಪನವರು ಮನಸ್ಸಿಗೆ ನೋವಾಗಿ ರಾಜೀನಾಮೆ ವಿಚಾರ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದರು.
ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಕೆಲವರು ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಮಾಧ್ಯಮಗಳ ಮುಂದೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವಿಚಾರದಲ್ಲಿ ಸಿಎಂ ಬೇಜಾರು ಮಾಡಿಕೊಂಡು ಈ ಮಾತುಗಳನ್ನು ಹೇಳಿರಬಹುದು ಎಂದರು.