ಬೆಂಗಳೂರು :ರಾಜಾಜಿನಗರದ ಕೈಗಾರಿಕಾ ಪ್ರದೇಶದಲ್ಲಿ ಪಾರ್ಕ್ ಮಾಡಲಾಗಿದ್ದ ಅಂಬಾಡಿಸರ್ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಮಾಗಡಿ ರೋಡ್ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತನ ಹೆಸರು, ವಿಳಾಸ ಸೇರಿದಂತೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಕಾರ್ ಪಾರ್ಕ್ ಮಾಡಲಾಗಿದ್ದ ಜಾಗದಲ್ಲಿ ದುವಾರ್ಸನೆ ಬರುತ್ತಿದ್ದರಿಂದ ಸ್ಥಳೀಯರು ಕಾರಿನ ಬಳಿ ಪರಿಶೀಲಿಸಿದಾಗ ಕಾರಿನಲ್ಲಿ ಮೃತದೇಹ ಇರುವುದನ್ನು ಕಂಡಿದ್ದಾರೆ. ಕೂಡಲೇ ಪೊಲೀಸರಿಗೆ ಸುದ್ದಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.