ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಹೊಡೆದಾಟ; ವಿಡಿಯೋ ವೈರಲ್! - Belgaum Rural Police Station

ಬೆಳಗಾವಿಯಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ ಸದಸ್ಯರು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಗಲಾಟೆ ಗಲಾಟೆ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

Deadly attack
ಜಗಳ

By

Published : Oct 3, 2020, 5:39 PM IST

ಬೆಳಗಾವಿ:ಆಸ್ತಿ ವಿವಾದ ಸಂಬಂಧ ಎರಡು ಗುಂಪಿನ ಸದಸ್ಯರು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಗಲಾಟೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದೆ.

ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಗಲಾಟೆ ಮಾಡಿದ ದೃಶ್ಯವನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ವೈರಲ್ ಆಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ ನಡುವೆ ಜಗಳ

ಕೈಯಲ್ಲಿ ತಲವಾರ್ ಸೇರಿ ಇತರೆ ಮಾರಕಾಸ್ತ್ರ ಹಿಡಿದು ಗಲಾಟೆ ಮಾಡಿಕೊಂಡಿದ್ದಾರೆ. ಎರಡು ಕುಟುಂಬಗಳ ಮಹಿಳೆಯರ ಮಧ್ಯೆ ತೀವ್ರ ವಾಗ್ವಾದ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿದ ಪರಿಣಾಮ ಮಹಿಳೆಯರು ಜಡೆ ಹಿಡಿದು ಎಳೆದಾಡಿಕೊಂಡಿದ್ದಾರೆ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬದ ಮೇಲೆ 50 ಜನರ ತಂಡ ಅಟ್ಯಾಕ್ ಮಾಡಲಾಗಿದ್ದು, ಕೈಯಲ್ಲಿ ಖಾರದ ಪುಡಿ ಎರಚಿ ಮಾರಕಾಸ್ರ್ತ, ಕಟ್ಟಿಗೆಗಳಿಂದ ಹಲ್ಲೆಗೆ ಯತ್ನಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details