ಬೆಳಗಾವಿ: ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಶ್ರೀದೇವಿ ಹುಕ್ಕೇರಿ (37) ಕೊರೊನಾಗೆ ಬಲಿಯಾಗಿದ್ದಾರೆ.
ಮೃತ ಶಿಕ್ಷಕಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ್ದರು. ಈ ವೇಳೆ ಕೊರೊನಾ ತಗುಲಿ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.