ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ತಂದೆ-ಮಗ ಇಬ್ಬರಿಗೂ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಿಕಾರ್ಜುನ್ (14) ಹಾಗೂ ಮುತ್ತಪ್ಪ (40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಕಳೆದ ಆಗಸ್ಟ್ 29ರಂದು ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಗಸ್ಟ್ 31 ರಂದು ಮಲ್ಲಿಕಾರ್ಜುನ್ ಸಾವನ್ನಪ್ಪಿದ್ದು, ಸೆ. 2ರಂದು ಚಿಕಿತ್ಸೆ ಫಲಕಾರಿಯಾಗದೇ ಮುತ್ತಪ್ಪ ಕೂಡ ಸಾವನ್ನಪ್ಪಿದ್ದಾನೆ. ಇಬ್ಬರನ್ನು ಅಥಣಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರನ್ನೂ ಕಳೆದುಕೊಂಡಿರುವ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.