ಕರ್ನಾಟಕ

karnataka

ETV Bharat / state

ರೈತರಿಗೆ ಡಿಸಿಸಿ ಬ್ಯಾಂಕ್ ಮೂಲಕ ₹15,300 ಕೋಟಿ ಸಾಲ ನೀಡಲು ನಿರ್ಧಾರ - Decision to lend 15300 crore to farmers

ಲಾಕ್​ಡೌನ್ ಸಂದರ್ಭದಲ್ಲಿ ಹೈನುಗಾರರ ನೆರವಿಗೆ ಬಂದ ಸರ್ಕಾರವು ಅವರಿಂದ ಹಾಲು ಖರೀದಿಸಿ 2 ಕೋಟಿ ಲೀಟರ್ ಹಾಲನ್ನು ಉಚಿತವಾಗಿ ಜನರಿಗೆ ಹಂಚಿಕೆ ಮಾಡಿರುವುದು ಸರ್ಕಾರದ ಬದ್ಧತೆಗೆ ಸಾಕ್ಷಿ..

Cooperative Minister ST Somashekhar
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

By

Published : Nov 18, 2020, 5:15 PM IST

ಬೆಳಗಾವಿ:ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಡಿಸಿಸಿ ಬ್ಯಾಂಕ್​ಗಳ ಮೂಲಕ ರೈತರಿಗೆ ₹15,300 ಕೋಟಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ ಕೊರೊನಾ-ಆತ್ಮನಿರ್ಭರ ಭಾರತ ಸಹಕಾರ ಸಂಸ್ಥೆಗಳು ಎಂಬ ಧ್ಯೇಯದೊಂದಿಗೆ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಅವರು ಮಾತನಾಡಿದರು.

ಆತ್ಮನಿರ್ಭರ ಯೋಜನೆಯಡಿ ₹630 ಕೋಟಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಸಣ್ಣ ರೈತರು ಸೇರಿದಂತೆ ಲಾಕ್​​ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕಿದ ಎಲ್ಲರಿಗೂ ಸಾಲ ಸೌಲಭ್ಯ ನೀಡಲಾಗುವುದು. ನಾಲ್ಕು ವಿಭಾಗಗಳ ಮೂಲಕ ಸಾಲ-ಸೌಲಭ್ಯ ವಿತರಿಸಲಾಗುವುದು.

ರೈತರ ಅನುಕೂಲಕ್ಕಾಗಿ ಕೆಎಂಎಫ್ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರಾಜ್ಯದ ಎಲ್ಲಾ 14 ಯೂನಿಯನ್​ಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಬೆಳಗಾವಿಯಲ್ಲಿ ಮೆಗಾ ಡೇರಿ ನಿರ್ಮಾಣ :ಬೆಳಗಾವಿ ನೂರು ಎಕರೆಯಲ್ಲಿ ಮೆಗಾ ಡೇರಿ ನಿರ್ಮಿಸುವುದು ಬಾಲಚಂದ್ರ ಜಾರಕಿಹೊಳಿ ಅವರ ಕನಸು. ಇದರಿಂದ ಈ ಭಾಗದ ನೂರಾರು ಜನರಿಗೆ‌ ಉದ್ಯೋಗ ಲಭಿಸುವುದರ ಜತೆಗೆ ಹೈನುಗಾರಿಕೆ ಉದ್ಯಮ‌ ಪ್ರಗತಿಯಾಗಲಿದೆ. ಶೀಘ್ರದಲ್ಲೇ ಮೆಗಾ ಡೇರಿ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ ಎಂದು ಸಚಿವರು ಹೇಳಿದರು.

ABOUT THE AUTHOR

...view details