ಕರ್ನಾಟಕ

karnataka

ETV Bharat / state

ಬೆಳಗಾವಿ ಲೋಕಸಭಾ ಉಪಚುನಾವಣೆ ಘೋಷಣೆ: ನೀತಿ ಸಂಹಿತೆ ಪಾಲನೆಗೆ ಡಿಸಿ ಸೂಚನೆ - ನೀತಿಸಂಹಿತೆ ಜಾರಿ ಪಾಲನೆಗೆ ಡಿಸಿ ಸೂಚನೆ

ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿದೆ. ಇದೀಗ ಉಪಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಪಾಲನೆ ಸೇರಿದಂತೆ ಎಲ್ಲ ತಂಡಗಳು ಸಕ್ರಿಯವಾಗಿ ಕಾರ್ಯಾರಂಭಿಸಬೇಕು ಎಂದು ತಿಳಿಸಿದರು.

Belgaum Lok Sabha by-election news
ನೀತಿಸಂಹಿತೆ ಜಾರಿ ಪಾಲನೆಗೆ ಡಿಸಿ ಸೂಚನೆ

By

Published : Mar 16, 2021, 9:42 PM IST

ಬೆಳಗಾವಿ: ಲೋಕಸಭಾ ಉಪ‌ಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ತಕ್ಷಣವೇ ಜಾರಿಗೆ ಬಂದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಓದಿ: Karnataka Covid Update: ಇಂದು ಸಾವಿರ ದಾಟಿದ ಸೋಂಕಿತರ ಸಂಖ್ಯೆ; 6 ಮಂದಿ ಬಲಿ

ನಗರದ ಡಿಸಿ ಕಚೇರಿಯಲ್ಲಿ‌ ನಡೆದ ತುರ್ತು ವಿಡಿಯೋ ಸಂವಾದದಲ್ಲಿ ಲೋಕಸಭಾ ಚುನಾವಣೆ ಘೋಷಣೆ ಬಗ್ಗೆ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿದೆ. ಇದೀಗ ಉಪಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ಪಾಲನೆ ಸೇರಿದಂತೆ ಎಲ್ಲ ತಂಡಗಳು ಸಕ್ರಿಯವಾಗಿ ಕಾರ್ಯಾರಂಭಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ‌ ಅಧಿಕಾರಿ ದರ್ಶನ್ ಹೆಚ್.ವಿ. ಮಾತನಾಡಿ, 80 ವರ್ಷ ಮೇಲ್ಪಟ್ಟವರು, ಕೋವಿಡ್ ಸೋಂಕಿತರು ಹಾಗೂ ವಿಕಲಚೇತನರಿಗೆ ಪೋಸ್ಟಲ್ ಬ್ಯಾಲೆಟ್ (ಅಂಚೆ ಮತಪತ್ರ) ಒದಗಿಸಲಾಗುವುದು. ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಮುಂದಿನ‌ ಇಪ್ಪತ್ನಾಲ್ಕು ಗಂಟೆಯಲ್ಲಿ ಸರ್ಕಾರದ ಸಾಧನೆ ಬಿಂಬಿಸುವಂತಹ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಬೇಕೆಂದರು.

ABOUT THE AUTHOR

...view details