ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಕನ್ನಡ ಮಾಧ್ಯಮದಲ್ಲಿ ದ್ವೀತಿಯ ಸ್ಥಾನ ಪಡೆಯುವುದರ ಮೂಲಕ ಪೋಷಕರ ಹಾಗೂ ತಾನೂ ಕಲಿತ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.
ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಜನತಾ ಶಿಕ್ಷಣ ಸಂಸ್ಥೆಯ ಪ್ರಗತಿ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಪಾ ಪಾರಿಸ ನಾಗನೂರ 2019-20ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 622 ಅಂಕ ಪಡೆದು ಶೇ.99.52ರಷ್ಟು ಅಂಕ ಗಳಿಸಿದ್ದಾಳೆ. ಈ ಮೂಲಕ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಮತ್ತು ಹಾರೂಗೇರಿ ಪಟ್ಟಣಕ್ಕೆ ಕೀರ್ತಿ ತಂದಿದ್ದಾಳೆ. ಸತತ ಪ್ರಯತ್ನ ಹಾಗೂ ಓದುವ ಹವ್ಯಾಸ ರೂಪಿಸಿಕೊಂಡೆರ ನಮಗೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುವುದನ್ನು ಆಕೆ ನಿರೂಪಿಸಿದ್ದಾಳೆ.