ಚಿಕ್ಕೋಡಿ(ಬೆಳಗಾವಿ) :ನದಿ ಪಕ್ಕದಲ್ಲೇ ಇರುವ ಕರದಗಾ-ನೇಜ ರಸ್ತೆಯು ಸಂಪೂರ್ಣ ಹಾಳಾಗಿದೆ. ಇದರಿಂದಾಗಿ ವಾಹನ ಸವಾರರು, ಸಾರ್ವಜನಿಕರು ಪರದಾಡುವ ಪರಿಸ್ಥತಿ ನಿರ್ಮಾಣವಾಗಿದೆ.
ದುರಸ್ಥಿಯಾಗದ ಕರದಗಾ-ನೇಜ ರಸ್ತೆ.. ತಪ್ಪದ ವಾಹನ ಸವಾರರ ಪರದಾಟ.. - Nippani in Belagavi
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕರದಗಾ-ನೇಜ ರಸ್ತೆಯು ನದಿಯ ಪಕ್ಕದಲ್ಲೇ ಇದ್ದು, ಸುಮಾರು 5 ಕಿ.ಮೀ ನಷ್ಟು ಸಂಪೂರ್ಣ ಹಾಳಾಗಿದೆ. ಈ ರಸ್ತೆಯಲ್ಲಿ ದಿನಂಪ್ರತಿ ನೂರಾರು ವಾಹನಗಳು ಸಂಚರಿಸುತ್ತವೆ. ಅದರಲ್ಲೂ ಕಬ್ಬಿನ ಟ್ರಾಕ್ಟರ್ಗಳು ಹೆಚ್ಚಾಗಿ ಸಂಚರಿಸುವ ಈ ಮಾರ್ಗದಲ್ಲಿ ಬೈಕ್ ಸವಾರರು ತಮ್ಮ ಜೀವ ಕೈಯಲ್ಲಿ ಹಿಡಿದು ಗಾಡಿ ಚಲಾಯಿಸುವ ಪರಸ್ಥಿತಿ ಇದೆ.

ಈ ಬಗ್ಗೆ ಅಧಿಕಾರಿಗಳೊಂದಿಗೆ ಕೇಳಿದರೆ ಅವರು, ಈಗಾಗಲೇ ಕಾಮಗಾರಿ ಪ್ರಾರಂಭಿಸಲು ಗುತ್ತಿಗೆದಾರರಿಗೆ ವಹಿಸಿದ್ದೇವೆ ಎನ್ನುತ್ತಾರೆ. ಆದರೆ, ಗುತ್ತಿಗೆದಾರರ ನಿರ್ಲಕ್ಷತನದಿಂದ ಕರದಗಾ-ನೇಜ ರಸ್ತೆ ಕಾಮಗಾರಿ ಪ್ರಾರಂಭವಾಗದೆ ಅಲ್ಲೇ ಉಳಿದಿದೆ. ಕಳೆದ ನಾಲ್ಕೈದು ತಿಂಗಳಿನಿಂದ ಸಣ್ಣಪುಟ್ಟ ಅಪಘಾತಗಳು ಸಂಭವಿಸಿದ್ದು, ಇನ್ನಾವುದೇ ಅಹಿತಕರ ಘಟನೆ ನಡೆಯುವ ಮೊದಲು ಈ ರಸ್ತೆ ಕಾಮಗಾರಿ ಪ್ರಾರಂಭಿಸಿ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.