ಬೆಳಗಾವಿ: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಸಿಗಬೇಕೆಂದು ಬಿಜೆಪಿಯ ಎಲ್ಲಾ ಒಕ್ಕಲಿಗ ಸಚಿವರು, ಶಾಸಕರು ಸೇರಿ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿ. ಶುಕ್ರವಾರ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮೀಸಲಾತಿ ಹಕ್ಕೊತ್ತಾಯ ಮಾಡಲು ಸರ್ವಾನುಮತದ ತೋರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಬಂಟ್ಸ್ ಸಮುದಾಯ ಮೀಸಲಾತಿಯಿಂದ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ನಗರ ಒಕ್ಕಲಿಗರನ್ನು ಸಹ ಇದರಲ್ಲಿ ಸೇರಿಸಬೇಕೆಂದಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಸಿಎಂ ಭೇಟಿ ಮಾಡಿ ನಮ್ಮ ಸಮುದಾಯಕ್ಕಾಗಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಕೇಳಿಕೊಳ್ಳುತ್ತೇವೆ. ಜನವರಿ 4ಕ್ಕೆ ಸಮುದಾಯದ ಸ್ವಾಮೀಜಿಗಳೊಂದಿಗೆ ಸಮುದಾಯದ ಬೇಡಿಕೆ ಕುರಿತು ಚರ್ಚೆ ಮಾಡುತ್ತೇವೆ. ನಮ್ಮ ಸಮುದಾಯದ ಜನಸಂಖ್ಯೆ ಆಧರಿಸಿ ಮೀಸಲಾತಿ ನೀಡಲಿ ಎಂದು ಹೇಳಿದರು.