ಕರ್ನಾಟಕ

karnataka

ETV Bharat / state

ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣ ಪತ್ರ ವಿತರಣೆಗೆ ಆಗ್ರಹ - ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣದ ಪತ್ರ ವಿತರಣೆ ಮಾಡುವಂತೆ ಒತ್ತಾಯ

ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಜನಪ್ರತಿನಿಧಿಗಳ ಮನೆ ಚಲೋ ಚಳುವಳಿಯನ್ನು ತಳವಾರ ಸಮುದಾಯದ ಮುಖಂಡರು ಹಮ್ಮಿಕೊಂಡಿದ್ದಾರೆ.

Demand to distribute ST certificate to Talawara community
ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣದ ಪತ್ರ ವಿತರಣೆ ಮಾಡುವಂತೆ ಒತ್ತಾಯ

By

Published : Aug 30, 2020, 2:18 PM IST

ಅಥಣಿ: ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಜನಪ್ರತಿನಿಧಿಗಳ ಮನೆಗೆ ಚಲೋ ಚಳುವಳಿಯನ್ನು ಅಥಣಿ ತಾಲೂಕಿನ ತಳವಾರ ಸಮುದಾಯದ ಮುಖಂಡರು ನಡೆಸಿದರು.

ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ನಿವಾಸಕ್ಕೆ ತೆರಳಿ ತಳವಾರ ಸಮುದಾಯವನ್ನು ಎಸ್​ಟಿ ಜನಾಂಗಕ್ಕೆ ಸೇರಿಸಿ ಪ್ರಮಾಣ ಪತ್ರ ನೀಡುವಂತೆ ಶಾಸಕರ ಆಪ್ತ ಸಹಾಯಕರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಲಾಯಿತು.

ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣದ ಪತ್ರ ವಿತರಣೆ ಮಾಡುವಂತೆ ಒತ್ತಾಯ

ಇದೆ ವೇಳೆ ರಾಜು ಜಮಖಂಡಿಕರ ಮಾತನಾಡಿ, ತಳವಾರ ಸಮಾಜವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ (ಎಸ್​ಟಿ) ಸೇರಿಸಿ ಅಧಿಸೂಚನೆ ಹೊರಡಿಸಿದ್ದು ನಮಗೆಲ್ಲ ತಿಳಿದಿರುವ ವಿಷಯ. ಆದರೆ ರಾಜ್ಯ ಸರ್ಕಾರ ಕೂಡಾ ಅದೇ ರೀತಿ ಅಧಿಸೂಚನೆ ಹೊರಡಿಸಿದೆ. ಅದನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ತಲುಪಿಸದೆ ಮುಚ್ಚಿಟ್ಟು ಬೇರೆ ಬೇರೆ ರೀತಿಯ ವ್ಯಾಖ್ಯಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಗೊಂದಲಮಯ ಸುತ್ತೋಲೆಗಳನ್ನು ಹೊರಡಿಸಿ, ಅಧಿಕಾರಿಗಳಿಗೆ ಮತ್ತು ಸಮಾಜದ ಜನಕ್ಕೆ ದಿಕ್ಕು ತಪ್ಪಿಸುವ ಷಡ್ಯಂತ್ರ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು.

ಸಮಾಜ ಕಲ್ಯಾಣ ಸಚಿವ ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತಂದರೂ ಅಧಿಕಾರಿಗಳಿಗೆ ಯಾವುದೇ ಸ್ಪಷ್ಟ ನಿರ್ದೇಶನ ನೀಡುತ್ತಿಲ್ಲ. ಈ ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳಿಗೆ, ಕೆಲವು ನೌಕರರಿಗೆ ತುಂಬಾ ತೊಂದರೆಯಾಗುತ್ತಿದೆ. ದಯವಿಟ್ಟು ತಳವಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಪ್ರಮಾಣ ಪತ್ರ ನಿಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಒಂದು ವೇಳೆ ಮಾಡದಿದ್ದರೆ ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details