ಬೆಳಗಾವಿ :ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಜ.14ರಂದು ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ನಗರದ ಗಾಂಧಿ ಸಭಾಂಗಣದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕುರಿತಂತೆ ಜಿಲ್ಲೆಯ ಲಿಂಗಾಯತ ಸಮುದಾಯದ ಮುಖಂಡರೊಂದಿಗೆ ಪಾದಯಾತ್ರೆ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು. ಬಳಿಕ ಮಾತನಾಡಿದ ಅವರು, ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಜನವರಿ 14ರಿಂದ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಅಂದಾಜು 700 ಕಿ.ಮೀವರೆಗೆ ಪಾದಯಾತ್ರೆ ನಡೆಸಲಿದ್ದೇವೆ.