ಬೆಳಗಾವಿ: ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಇಬ್ಬರು ಯುವತಿಯರನ್ನು ಎಪಿಎಂಸಿ ಪೊಲೀಸರು ರಕ್ಷಿಸಿದ್ದಾರೆ.
ಬೆಳಗಾವಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳ ಬಂಧನ... ಇಬ್ಬರು ಯುವತಿಯರ ರಕ್ಷಣೆ - Vannura village in the Bylahongala taluk of Belgaum district
ನಿನ್ನೆಯಷ್ಟೇ ಬೆಳಗಾವಿಯ ಟಿಳಕವಾಡಿಯ ಸ್ಪಾ ಸೆಂಟರ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಖದೀಮರನ್ನು ಸೈಬರ್ ಕ್ರೈಂ ಪೊಲೀಸರು ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಣೆ ಮಾಡಿ ಇಬ್ಬರನ್ನು ಬಂಧಿಸಿದ್ದರು. ಇಂದು ಮತ್ತೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಇಬ್ಬರು ಯುವತಿಯರನ್ನು ಎಪಿಎಂಸಿ ಪೊಲೀಸರು ರಕ್ಷಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದ ಮಾರುತಿ ಕೆಳಗೇರಿ(30) ಹಾಗೂ ಹುಕ್ಕೇರಿ ತಾಲೂಕಿನ ಹುಲ್ಲೋಳ್ಳಿ ಗ್ರಾಮದ ಸಿದ್ದಪ್ಪ ಚೌಗಲಾ(33) ಬಂಧಿತ ಆರೋಪಿಗಳು. ಬಂಧಿತರು ಇಲ್ಲಿನ ಸದಾಶಿವ ನಗರದ ಲಾಸ್ಟ್ ಬಸ್ ಸ್ಟಾಪ್ ಬಳಿ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಲ್ಲದೇ ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿರುವ ಸ್ಪಾ ಸೆಂಟರ್ ಹೆಸರನಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳನ್ನು ನಡೆಸುವ ಅಡ್ಡೆಗಳ ಮೇಲೆಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ತನಿಖೆ ಮುಂದುವರೆಸಿದ್ದಾರೆ.