ಬೆಳಗಾವಿ: ಸತೀಶ್ ಜಾರಕಿಹೊಳಿ ಭಾಷಣದ ಬಗ್ಗೆ ಮತ್ತೊಂದು ವಿವಾದವನ್ನು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಟ್ವೀಟ್ ಮೂಲಕ ಹುಟ್ಟುಹಾಕಿದ್ದು ಧರ್ಮವೀರ ಸಂಭಾಜಿ ಮಹಾರಾಜರಿಗೆ ಸತೀಶ್ ಜಾರಕಿಹೊಳಿ ಅಪಮಾನ ಮಾಡಿದ್ದಾರೆ ಎಂದು ಟ್ವಿಟರ್ ಮೂಲಕ ಆರೋಪಿಸಿದ್ದಾರೆ.
ಕಳೆದ ನ.6ರಂದು ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯಡಿ ನಡೆದಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ ಎನ್ನಲಾದ 42 ನಿಮಿಷದ ಭಾಷಣದ ವಿಡಿಯೋ ತುಣಕನ್ನು ಫಡ್ನವಿಸ್ ಟ್ವೀಟ್ ಮಾಡಿ ಈ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.