ಧಾರವಾಡ :16 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಕೂಡ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲೋಕೇಶ್ ಜಗಲಸರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಪಿ.ಕೃಷ್ಣಕಾಂತ್ ಅವರನ್ನು ಬೆಂಗಳೂರಿನ ಸೌತ್ ಡಿವಿಜನ್‌ಗೆ ಡೆಪ್ಯುಟಿ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಇವರಿಂದ ತೆರವಾದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ, 2015ನೇ ಬ್ಯಾಚಿನ ಐಪಿಎಸ್ ಅಧಿಕಾರಿ ಲೋಕೇಶ್ ಜಗಲಸರ್ ಅವರನ್ನು ನೇಮಕ ಮಾಡಲಾಗಿದೆ.