ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿಗೆ ಬಂಧಿಖಾನೆ ಇಲಾಖೆ ಡಿಐಜಿ ಸೋಮಶೇಖರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ರಾಜಾಥಿತ್ಯ ಆರೋಪ: ಹಿಂಡಲಗಾ ಜೈಲಿಗೆ ಡಿಐಜಿ ದಿಢೀರ್ ಭೇಟಿ - DIG Somashekhar
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲಿನಲ್ಲಿ ರಾಜಾಥಿತ್ಯ ನೀಡಲಾಗ್ತಿದೆ. ಜೈಲಿನ ಸಿಬ್ಬಂದಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಬೆಳಗಾವಿ ಹಿಂಡಲಗಾ ಜೈಲಿಗೆ ಡಿಐಜಿ ಸೋಮಶೇಖರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜೈಲಿನ ಸಿಬ್ಬಂದಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸೋಮಶೇಖರ್ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಕೈದಿಗಳಿಗೆ ಹೊರಗಿನ ಆಹಾರ ಪೂರೈಕೆ ಮಾಡದಂತೆ ಸರ್ಕಾರ ಸೂಚನೆ ನೀಡಿದೆ. ಅಲ್ಲದೇ ಸಂಬಂಧಿಕರ ಭೇಟಿಗೆ ಅವಕಾಶ ಇಲ್ಲ. ಆದರೆ ಜೈಲಿನಲ್ಲಿರುವ ಕೈದಿಗಳಿಗೆ ಹೊರಗಿನ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಘಟನಾಘಟಿ ಕೈದಿಗಳಿಗೆ ಆಹಾರ ಪೂರೈಕೆ ನಡೆಯುತ್ತಿದೆ ಎಂಬ ಬಗ್ಗೆ ದೂರುಗಳು ಬಂಧಿಖಾನೆ ಇಲಾಖೆಗೆ ಸಲ್ಲಿಕೆಯಾಗಿವೆ.
ಈ ಹಿನ್ನೆಲೆಯಲ್ಲಿ ದಿಢೀರ್ ಜೈಲಿಗೆ ಭೇಟಿ ನೀಡಿದ ಡಿಐಜಿ ಸೋಮಶೇಖರ್ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.