ಬೆಳಗಾವಿ: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸರಬರಾಜು ಮಾಡುತ್ತಿರುವ ಉಚಿತ ಹಾಲು ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ನಗರದ ನಾಥ್ ಪೈ ವೃತ್ತದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಿದ ಅವರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.