ಬೆಳಗಾವಿ/ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಬಾಧಿಸುತ್ತಿರುವ ಎಲೆಚುಕ್ಕಿ ರೋಗ ಹಾಗೂ ಅಡಿಕೆ ಎಲೆಚುಕ್ಕಿ ರೋಗ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ರೈತರನ್ನು ತೀವ್ರವಾಗಿ ಕಾಡುತ್ತಿದ್ದು, ಇದರ ಸಂಕಷ್ಟಗಳ ಕುರಿತು ಸದಸ್ಯರು ವಿಧಾನಸಭೆಯಲ್ಲಿ ಇಂದು ಚರ್ಚೆ ನಡೆಸಿದರು.
ಶಾಸಕ ಉಮಾನಾಥ್ ಕೋಟ್ಯಾನ್ ಅವರ ಪರವಾಗಿ ಶಾಸಕ ಸಂಜೀವ್ ಮಟಂದೂರ್ ಅವರು ಸಚಿವ ಮುನಿರತ್ನ ಅವರಿಗೆ ಪ್ರಶ್ನೆ ಮಾಡಿದ್ದರು. ಸಚಿವರ ಪರವಾಗಿ ಆರಗ ಜ್ಞಾನೇಂದ್ರ ಅವರು ಉತ್ತರಿಸಿ, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಎಲೆಚುಕ್ಕಿ ರೋಗ ಕಳೆದ ಎರಡು ವರ್ಷಗಳಿಂದ ತೀವ್ರವಾಗಿ ಕಾಡುತ್ತಿದೆ. ಅನೇಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳೆದು ನಿಂತ ಅಡಿಕೆ ರೋಗಕ್ಕೆ ತುತ್ತಾದರೆ ರೈತರು ಇದನ್ನು ತಡೆದುಕೊಳ್ಳುವುದಾದರೂ ಹೇಗೆ? ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ರೋಗ ನಿಯಂತ್ರಣಕ್ಕೆ ಹಲವಾರು ಕ್ರಮ:ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ವಿಜ್ಞಾನಿಗಳಿಗೆ ಸಂಶೋಧನೆ ನಡೆಸಿ ಪರಿಹಾರ ನೀಡಲು ತಕ್ಷಣವೇ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ವಿಜ್ಞಾನಿಗಳಿಗೆ ಸಂಶೋಧನೆ ನಡೆಸಿ ಪರಿಹಾರ ನೀಡಲು ತಕ್ಷಣ 20.43 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಶಿವಮೊಗ್ಗದ ತೋಟಗಾರಿಕೆ ವಿವಿ ಹಾಗೂ ಕೃಷಿ ಇಲಾಖೆ, ಕೃಷಿ ವಿವಿಗಳಲ್ಲಿ ಹಿರಿಯ ವಿಜ್ಞಾನಿಗಳನ್ನು ಸಂಶೋಧನೆ ನಡೆಸಿ ಪರಿಹಾರ ನೀಡಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಶಾಶ್ವತವಾದ ಪರಿಹಾರ ಅಗತ್ಯವಿದೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ತಮ್ಮ ಸ್ವಕ್ಷೇತ್ರ ತೀರ್ಥಹಳ್ಳಿಗೆ ಭೇಟಿ ನೀಡಿದ ಮೇಲೆ ಅವರನ್ನು ತೋಟಕ್ಕೆ ಕರೆದುಕೊಂಡು ಹೋಗಿ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿದ್ದೇವೆ. ಎಲೆಚುಕ್ಕಿ ರೋಗ ರೈತರನ್ನು ಹೈರಾಣಾಗಿಸಿದೆ. ಇದಕ್ಕೆ ಶಾಶ್ವತವಾದ ಪರಿಹಾರ ಅಗತ್ಯವಿದೆ. ಇತ್ತೀಚೆಗೆ ಕೇಂದ್ರ ಸರ್ಕಾರದ ಬಳಿ ನಿಯೋಗ ಕೊಂಡೊಯ್ದಿದ್ದೆವು. ಕೇಂದ್ರ ಸರ್ಕಾರವು ನಮಗೆ ಸೂಕ್ತವಾಗಿ ಸ್ಪಂದಿಸಿ ಸಂಶೋಧನೆ ನಡೆಸಲು ಅಗತ್ಯವಿರುವ ಹಣಕಾಸಿನ ನೆರವು ಸೇರಿದಂತೆ ಎಲ್ಲ ರೀತಿಯ ಭರವಸೆ ನೀಡುವುದಾಗಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು.