ಚಿಕ್ಕೋಡಿ :ಹುಕ್ಕೇರಿ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ಹುಕ್ಕೇರಿಯಲ್ಲಿ ರಣಭೀಕರ ಮಳೆ: ಹಾನಿಗೊಳಗಾದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ, ಪರಿಶೀಲನೆ - chikkodi rain news 2020
ಹುಕ್ಕೇರಿ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಅನಾಹುತಗಳು ಸಂಭವಿಸಿದ್ದು, ಸೂರು ಕಳೆದುಕೊಂಡವರಿಗೆ ಪರಿಹಾರ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಎಂ ಜಿ ಹಿರೇಮಠ
ಪಟ್ಟಣದಲ್ಲಿ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಮನೆ ಕಳೆದುಕೊಂಡ ಜನರಿಗೆ ಸರ್ವೇ ಮಾಡಿಸಿ ಮನೆ ನಿರ್ಮಾಣ ಮಾಡಿಕೊಳ್ಳಲು ಅನುದಾನ ನೀಡಲಾಗುವುದು ಎಂದರು.
ಈಗಾಗಲೇ ಹುಕ್ಕೇರಿ ಪಟ್ಟಣದಲ್ಲಿ ಎರಡು ಬ್ರಿಡ್ಜ್ ಸರಿಪಡಿಸಬೇಕೆಂಬ ಬೇಡಿಕೆ ಇದೆ. ಅವುಗಳನ್ನು ಸಹ ಎಸ್ಟಿಮೇಟ್ ಮಾಡಲು ಅಧಿಕಾರಿಗಳಿಗೆ ನಾನು ಸೂಚಿಸಿದ್ದೇನೆ. ಎಸ್ಟಿಮೇಟ್ ಆದ ಬಳಿಕ ಬ್ರಿಡ್ಜ್ ಮರು ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳುತ್ತೇವೆ. ಸೂರು ಕಳೆದುಕೊಂಡವರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು.