ಕರ್ನಾಟಕ

karnataka

ETV Bharat / state

ಮಳೆಗಾಲದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆ ಪೂರ್ವ ಸಿದ್ಧತೆಗೆ ಅಧಿಕಾರಿಗಳಿಗೆ ಬೆಳಗಾವಿ ಡಿಸಿ ಸೂಚನೆ - Belagavi District Collector Notice news

ಕಳೆದ ಬಾರಿಯ ಭೀಕರ ಪ್ರವಾಹ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಎದುರಾದ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಜನರ ತುರ್ತು ರಕ್ಷಣೆಗೆ ಬೋಟ್ ಹಾಗೂ ಪುನರ್ವಸತಿಗೆ ಪರಿಹಾರ ಕೇಂದ್ರಗಳ ಸ್ಥಾಪನೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

District Collector Notice Emergency Management Preparedness
ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಸೂಚನೆ

By

Published : May 26, 2020, 3:21 PM IST

ಬೆಳಗಾವಿ: ಮಳೆಗಾಲ ಆರಂಭಗೊಳ್ಳಲಿರುವುದರಿಂದ ಪ್ರವಾಹ, ಅತಿವೃಷ್ಟಿ ಸೇರಿದಂತೆ ಎಲ್ಲಾ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯ ಭೀಕರ ಪ್ರವಾಹ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಎದುರಾದ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಜನರ ತುರ್ತು ರಕ್ಷಣೆಗೆ ಬೋಟ್ ಹಾಗೂ ಪುನರ್ವಸತಿಗೆ ಪರಿಹಾರ ಕೇಂದ್ರಗಳ ಸ್ಥಾಪನೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಉಪ ವಿಭಾಗ ಮಟ್ಟದಲ್ಲೂ ಇದೇ ವಾರದಲ್ಲಿ ಪೊಲೀಸ್, ಅಗ್ನಿಶಾಮಕ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಎಲ್ಲಾ ವಿಷಯಗಳ ಬಗ್ಗೆ ವಿಸ್ತ್ರೃತವಾಗಿ ಚರ್ಚೆ ನಡೆಸಬೇಕು ಎಂದು ಉಪ ವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು.

ಚರಂಡಿ, ನಾಲಾ ಸ್ವಚ್ಛಗೊಳಿಸಿ ಸೇತುವೆ ಪರಿಶೀಲಿಸಲು ಸೂಚನೆ:

ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿರುವ ಚರಂಡಿ ಮತ್ತು ನಾಲಾಗಳನ್ನು ಸ್ವಚ್ಛಗೊಳಿಸಬೇಕು. ಲೋಕೋಪಯೋಗಿ ಇಲಾಖೆಯು ರಸ್ತೆ, ಸಿ.ಡಿ. ಹಾಗೂ ಸೇತುವೆಗಳ ಬಗ್ಗೆ ಪರಿಶೀಲನೆ ಕೈಗೊಳ್ಳಬೇಕು. ಮಳೆ ನೀರಿನಿಂದ ಸಿ‌.ಡಿ. ಮತ್ತು ಸಣ್ಣ ಸೇತುವೆಗಳು ಬ್ಲಾಕ್ ಆಗದಂತೆ ನೋಡಿಕೊಳ್ಳಿ. ಆರೋಗ್ಯ ಇಲಾಖೆಯು ತುರ್ತು ವೈದ್ಯಕೀಯ ಸೇವೆ ಒದಗಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಪಶುಪಾಲನಾ ಇಲಾಖೆಯು ಅಗತ್ಯ ಮೇವು ಸಂಗ್ರಹ ಮತ್ತು ಲಸಿಕೆ ಬಗ್ಗೆ ಪೂರ್ವ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎನ್.ಡಿ.ಆರ್.ಎಫ್ ತಂಡದಿಂದ ಪರಿಶೀಲನೆ:

ಶೀಘ್ರದಲ್ಲೇ ಜಿಲ್ಲೆಗೆ ಎನ್.ಡಿ.ಆರ್.ಎಫ್. ತಂಡ ಕೂಡ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡಲಿದೆ. ಜಿಲ್ಲೆಗೆ ಅಗತ್ಯವಿರುವ ಬೋಟ್​​ಗಳ ಬಗ್ಗೆ ಪ್ರಸ್ತಾವ ಸಿದ್ಧಪಡಿಸಬೇಕು. ಅದೇ ರೀತಿ ತಕ್ಷಣಕ್ಕೆ ಬೋಟ್ ಪಡೆಯಲು ಮುಂಚಿತವಾಗಿಯೇ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಾಶಯದಿಂದ ನೀರು ಬಿಡುಗಡೆಗೆ ಮಹಾರಾಷ್ಟ್ರಕ್ಕೆ ಪತ್ರ:

ಮಹಾರಾಷ್ಟ್ರದ ಜಲಾಶಯಗಳಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು. ಜಲಾಶಯಗಳಿಂದ ನೀರು ಬಿಡುವಾಗ ಜಿಲ್ಲಾಡಳಿತಕ್ಕೆ ಮುಂಚಿತವಾಗಿಯೇ ಅಗತ್ಯ ಮಾಹಿತಿ ನೀಡಬೇಕು ಎಂದು ಮಹಾರಾಷ್ಟ್ರದ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಜಲಸಂಪನ್ಮೂಲ ಇಲಾಖೆಗೆ ತಕ್ಷಣವೇ ಪತ್ರವನ್ನು ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ ತಿಳಿಸಿದರು.

ABOUT THE AUTHOR

...view details