ಬೆಳಗಾವಿ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ 500 ಹೆಕ್ಟೇರ್ ಪ್ರದೇಶದ ದ್ರಾಕ್ಷಿ ನಾಶವಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ವಿವರಿಸಿದರು.
ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.230ರಷ್ಟು ಹೆಚ್ಚು ಮಳೆಯಾಗಿದೆ. ನವೆಂಬರ್ 1ರಿಂದ 20ರವರೆಗೆ ವಾಡಿಕೆಯಂತೆ 21 ಮಿ.ಮೀ ಮಳೆ ಆಗಬೇಕಿತ್ತು. ಈ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 61 ಮಿ.ಮೀ ಮಳೆಯಾಗಿದೆ. ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾನಿ ಬಗ್ಗೆ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಮೂರು ದಿನದಲ್ಲಿ ಜಂಟಿ ಸರ್ವೇ ಮಾಡಲು ಸೂಚನೆ ನೀಡಲಾಗಿದೆ. ಅಥಣಿ ತಾಲೂಕಿನಲ್ಲಿ 500 ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ನಾಶವಾಗಿದೆ ಎಂದರು.