ಕರ್ನಾಟಕ

karnataka

ETV Bharat / state

'ಆದಷ್ಟು ಬೇಗ ಮನೆಗಳನ್ನು ನಿರ್ಮಿಸಿಕೊಳ್ಳದಿದ್ರೆ ಪರಿಹಾರ ಹಣ ವಾಪಸ್​ ಪಡೆಯುತ್ತೇವೆ' - ಮನೆ ನಿರ್ಮಿಸಿಕೊಳ್ಳಲು ಪರಿಹಾರ ಹಣ

ನೆರೆ ಹಾನಿಗೆ ಒಳಗಾದವರಿಗೆ ಸರ್ಕಾರ ಮನೆಗಳನ್ನು ನಿರ್ಮಿಸಿಕೊಳ್ಳಲು ಪರಿಹಾರ ನೀಡಿದ್ದರೂ ಕೆಲವರು ಮನೆ ನಿರ್ಮಿಸಿಕೊಂಡಿಲ್ಲ. ಅದನ್ನು ಮತ್ತಷ್ಟು ತಡ ಮಾಡಿದರೆ, ಪರಿಹಾರದ ಹಣ ವಾಪಸ್ ಪಡೆಯಲಾಗುತ್ತದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಹೇಳಿದ್ದಾರೆ.

district-collector-statement-on-flood
ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ

By

Published : Jun 10, 2020, 6:32 PM IST

ಬೆಳಗಾವಿ: ಕಳೆದ ಬಾರಿ ಪ್ರವಾಹಕ್ಕೆ ತುತ್ತಾಗಿ‌ ಮನೆ ಕಳೆದುಕೊಂಡವರು ಆದಷ್ಟು ಬೇಗನೇ ಮನೆಗಳನ್ನು ನಿರ್ಮಿಸಿಕೊಳ್ಳಬೇಕು. ಇಲ್ಲದಿದ್ದರೆ ಪರಿಹಾರದ ಹಣ ವಾಪಸ್ ಪಡೆಯಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಹೇಳಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಈವರೆಗೂ ಪರಿಹಾರ ಬರದಿರುವ ಕುರಿತು ಗಮನಕ್ಕೆ ಬಂದಿದೆ. ಮಾಹಿತಿಯನ್ನು ಕಲೆ ಹಾಕಿ ಅಂತವರಿಗೆ ಪರಿಹಾರ ಕೊಡಿಸುವ ಕೆಲಸವನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.

ಈಗಾಗಲೇ ನೆರೆ ಹಾನಿಗೊಳಗಾದವರಿಗೆ ಸರ್ಕಾರ ಮನೆಗಳನ್ನು ನಿರ್ಮಿಸಿಕೊಳ್ಳಲು ಅವಕಾಶ ನೀಡಿದೆ. ಆದರೆ, ಕೆಲವರು ಮನೆ ನಿರ್ಮಿಸಿಕೊಂಡಿಲ್ಲ. ಬೇಗನೆ ಮನೆ ನಿರ್ಮಿಸಿಕೊಳ್ಳದಿದ್ದರೆ ಅಂತಹವರ ಪರಿಹಾರದ ಹಣವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿಗಳು ಸ್ಪಷ್ಟವಾದ ನಿರ್ದೇಶನ ನೀಡಿದ್ದಾರೆ. ಹೀಗಾಗಿ, ಶೀಘ್ರ ಎಲ್ಲರೂ ಮನೆಗಳನ್ನು ನಿರ್ಮಿಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ

ಈಗಾಗಲೇ ಮುಂಗಾರು ಪ್ರಾರಂಭವಾಗಿದೆ. ಎಲ್ಲಾ ಅಧಿಕಾರಿಗಳು ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕುರಿತು ಚರ್ಚಿಸಬೇಕು. ಆಕಸ್ಮಿಕವಾಗಿ‌ ಪ್ರವಾಹ ಎದುರಾದರೆ ಪರಿಸ್ಥಿತಿಯನ್ನು ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಎನ್​​​ಡಿಆರ್​​​ಫ್ ತಂಡವನ್ನು ಕರೆಸಿಕೊಳ್ಳಲಾಗಿದೆ. ಇದಲ್ಲದೇ ಎಸ್​​ಡಿಆರ್​​​​​ಎಫ್ ತಂಡ ನಮ್ಮಲಿದ್ದು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಹಾಗೂ ವಿವಿಧ ಅಧಿಕಾರಿಗಳಿಗೆ ಎನ್​​​ಡಿಆರ್​​ಎಫ್ ತಂಡದಿಂದ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿ ತಿಳಿಸಿದರು.

ಕೋವಿಡ್ ಆಸ್ಪತ್ರೆಯಲ್ಲಿ ಊಟದ ತಟ್ಟೆಯಲ್ಲಿ ಹುಳುಗಳಿರುವ ಕುರಿತು ಗಮನಕ್ಕೆ ಬಂದಿದ್ದು, ಈಗಾಗಲೇ ಫುಡ್ ಸೇಫ್ಟಿ ಅಧಿಕಾರಿಯನ್ನು ನೇಮಿಸಲಾಗಿದೆ‌ ಎಂದು ಪ್ರಶ್ನೆಯೊಂದಕ್ಕೆ ಜಿಲ್ಲಾಧಿಕಾರಿ ಉತ್ತರಿಸಿದರು.

ABOUT THE AUTHOR

...view details