ಕರ್ನಾಟಕ

karnataka

ETV Bharat / state

ಕೊಗನೊಳ್ಳಿ ಚೆಕ್ ಪೋಸ್ಟ್​​ಗೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ - ಸರ್ಕಾರದ ಮಾರ್ಗಸೂಚಿ

ನಿಪ್ಪಾಣಿ ತಾಲೂಕಿನ ವ್ಯಾಪ್ತಿಯಲ್ಲಿ ಕೊಗನೊಳ್ಳಿ, ಕೋಡಣಿ, ಬೋರಗಾಂವ ಹಾಗೂ ಮಾಂಗೂರ ಸೇರಿದಂತೆ ಒಟ್ಟು ಐದು ಕೂಡ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಅಂತರರಾಜ್ಯ ಸಂಚರಿಸುವ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತಿದೆ..

ಕೊಗನೊಳ್ಳಿ ಚೆಕ್ ಪೋಸ್ಟ್​​ಗೆ ಜಿಲ್ಲಾಧಿಕಾರಿ ಭೇಟಿ
ಕೊಗನೊಳ್ಳಿ ಚೆಕ್ ಪೋಸ್ಟ್​​ಗೆ ಜಿಲ್ಲಾಧಿಕಾರಿ ಭೇಟಿ

By

Published : Nov 28, 2021, 9:06 PM IST

ಬೆಳಗಾವಿ :ಕೋವಿಡ್ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ರಾಜ್ಯದ ಗಡಿಭಾಗದಲ್ಲಿರುವ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ ನೆರೆಯ ಮಹಾರಾಷ್ಟ್ರ ರಾಜ್ಯದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಪೂರ್ವ ಅವಧಿಯ RTPCR ನೆಗೆಟಿವ್ ವರದಿಯನ್ನು ಅಥವಾ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯವಾಗಿದೆ.

ಆದ್ದರಿಂದ ನೆಗೆಟಿವ್ ವರದಿ ಹೊಂದಿದವರನ್ನು ಮಾತ್ರ ರಾಜ್ಯದೊಳಗೆ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೊಗನೊಳ್ಳಿ ಚೆಕ್ ಪೋಸ್ಟ್​​ಗೆ ಜಿಲ್ಲಾಧಿಕಾರಿ ಭೇಟಿ..

ಗಡಿಭಾಗದಲ್ಲಿರುವ ಚೆಕ್ ಪೋಸ್ಟ್ ಮೂಲಕ ಸಾಗುವ ಪ್ರತಿ ವಾಹನವನ್ನು ತಡೆದು ಪ್ರಯಾಣಿಕರು ಆರ್‌ಟಿಪಿಸಿಆರ್‌ ನೆಗೆಟಿವ್ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರ್ತವ್ಯನಿರತ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಕೆಲವು ವಾಹನಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದಿರುವುದರಿಂದ ವಾಪಸ್ ಕಳುಹಿಸಿದರು. ಕೊಗನೊಳ್ಳಿ ಪ್ರಮುಖ ಚೆಕ್ ಪೋಸ್ಟ್ ಆಗಿರುವುದರಿಂದ ಅಂತಾರಾಜ್ಯ ಸಂಚರಿಸುವ ವಾಹನಗಳ ಮೇಲೆ ನಿರಂತರ ನಿಗಾವಹಿಸಬೇಕು.

ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಸರಕಾರ ಪ್ರಕಟಿಸುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನವನ್ನು ನೀಡಿದರು.

ನಿಪ್ಪಾಣಿ ತಾಲೂಕಿನ ವ್ಯಾಪ್ತಿಯಲ್ಲಿ ಕೊಗನೊಳ್ಳಿ, ಕೋಡಣಿ, ಬೋರಗಾಂವ ಹಾಗೂ ಮಾಂಗೂರ ಸೇರಿದಂತೆ ಒಟ್ಟು ಐದು ಕೂಡ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಅಂತರರಾಜ್ಯ ಸಂಚರಿಸುವ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತಿದೆ.

ಪ್ರಯಾಣಿಕರು ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿದ್ದರೆ ಮಾತ್ರ ಪ್ರಯಾಣಕ್ಕೆ ಅವಕಾಶವನ್ನು ನೀಡಲಾಗುತ್ತಿದೆ. ಇಲ್ಲದಿದ್ದರೆ ವಾಹನಗಳನ್ನು ವಾಪಸ್ ಕಳಿಸಲಾಗುತ್ತಿದೆ ಎಂದು ನಿಪ್ಪಾಣಿ ತಹಶೀಲ್ದಾರ್​ ಮೋಹನ‌ ಭಸ್ಮೆ ಮಾಹಿತಿ ನೀಡಿದರು.

ABOUT THE AUTHOR

...view details