ಕರ್ನಾಟಕ

karnataka

ETV Bharat / state

ವಸತಿ ಯೋಜನೆ ಚುರುಕುಗೊಳಿಸಲು ಕೇಂದ್ರ ಸಚಿವ ಸುರೇಶ್ ಅಂಗಡಿ ಸೂಚನೆ‌ - ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆ

ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಮನೆ ಒದಗಿಸಬೇಕು ಎಂಬುದು ಪ್ರಧಾನಮಂತ್ರಿಗಳ ಕನಸಾಗಿದೆ. ಆದ್ದರಿಂದ ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಸೂಚನೆ ನೀಡಿದರು.

District Development Coordination meeting
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆ

By

Published : Feb 15, 2020, 9:04 PM IST

ಬೆಳಗಾವಿ: ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಮನೆ ಒದಗಿಸಬೇಕು ಎಂಬುದು ಪ್ರಧಾನಮಂತ್ರಿಗಳ ಕನಸಾಗಿದೆ. ಆದ್ದರಿಂದ ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಸೂಚನೆ ನೀಡಿದರು.

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆ
ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ನಡೆದ 2019-20ನೇ ಸಾಲಿನ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ)ಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ವಸತಿ ಹಾಗೂ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ಸಮಗ್ರ ಯೋಜನೆಯೊಂದನ್ನು ಮಾರ್ಚ 31 ರೊಳಗೆ ರೂಪಿಸಬೇಕು ಎಂದು ತಿಳಿಸಿದರು. ನಗರ ವಸತಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 16,660 ಮನೆಗಳು ಅನುಮೋದನೆಗೊಂಡಿದ್ದು, 2,624 ಮನೆಗಳು ಪ್ರಗತಿ ಹಂತದಲ್ಲಿವೆ. ಮಾರ್ಚ್ ಅಂತ್ಯಕ್ಕೆ ಶೇ.100 ಗುರಿ ಸಾಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಪರಿಶಿಷ್ಟ ಜಾತಿ ಪಂಗಡದವರಿಗೆ 3.50ಲಕ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಮನೆ ನಿರ್ಮಿಸಿಕೊಡಲು 2.70 ಲಕ್ಷ ನೆರವು ನೀಡಲಾಗುತ್ತದೆ. ನಗರ ವಸತಿ ಯೋಜನೆ ಅನುಷ್ಠಾನ ಚುರುಕುಗೊಳಿಸಲು ಪ್ರತ್ಯೇಕ ಕಚೇರಿಯೊಂದನ್ನು ತೆರೆಯುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ 16 ಸಾವಿರ ಜನರು ಅರ್ಜಿಗಳನ್ನು ಸಲ್ಲಿಸಿದ್ದು, ಈಗಾಗಲೇ ಇವುಗಳನ್ನು ಪರಿಶೀಲಿಸಿ ಮೂರು ಸಮಗ್ರ ಯೋಜನೆಗಳನ್ನು ಅನುಮೋದನೆಗಾಗಿ ಕಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮಾಹಿತಿಯನ್ನು ನೀಡಿದರು.
ಬೆಳಗಾವಿಯಲ್ಲಿ ನಿವೇಶನ ಹೊಂದಿಲ್ಲದೇ ಇರುವ 19,656 ಜನರು ಮನೆಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಇದರಲ್ಲಿ 1,808 ಜನರ ಅರ್ಜಿ ಪರಿಶೀಲಿಸಿ ಅನುಮೋದಿಸಲಾಗಿದೆ ಎಂದರು.

ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 2.20 ಲಕ್ಷ ಮನೆಗಳ ನಿರ್ಮಾಣ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದರು. ಯಾವುದೇ ಯೋಜನೆಗಳಿರಲಿ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ.ಪ್ರತಿ ಮೂರು ತಿಂಗಳು ಸಮನ್ವಯ ಸಭೆ ಕಡ್ಡಾಯವಾಗಿ ನಡೆಸಬೇಕು. ಯೋಜನೆಗಳ ಅನುಷ್ಠಾನ ಸುಗಮವಾಗಿ ನಡೆಸುವ ಉದ್ಧೇಶದಿಂದ ಸಭೆ ನಡೆಸಲಾಗುತ್ತಿದ್ದು, ಯೋಜನೆಗೆ ಸಂಬಂಧಿಸಿದಂತೆ ಏನಾದರೂ ತಾಂತ್ರಿಕ ತೊಂದರೆಗಳಿದ್ದರೆ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು. ಕೇಂದ್ರ ಸರ್ಕಾರದ 33 ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದಿಶಾ ಸಮಿತಿಯ ಸಭೆಯಲ್ಲಿ ಚರ್ಚಿಸಿ, ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ABOUT THE AUTHOR

...view details