ಹುಬ್ಬಳ್ಳಿ:ಮಳೆಯಿಂದ ಹಾನಿಗೊಳಗಾದ ಹಳೇ ಹುಬ್ಬಳ್ಳಿ, ಗೌಸಿಯಾ ಗಲ್ಲಿ, ಆನಂದ ನಗರ, ಮುಲ್ಲಾನಗರ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಂತ್ರಸ್ತರಿಗೆ ಅಗತ್ಯ ಸಾಮಗ್ರಿಗಳನ್ನ ವಿತರಿಸಿದ್ದಾರೆ.
ಮಳೆಹಾನಿ ಪ್ರದೇಶ ಪರಿಶೀಲಿಸಿದ ಡಿಕೆಶಿ: ಸರ್ಕಾರದಿಂದ ಪರಿಹಾರ ಒದಿಸುವುದಾಗಿ ಭರವಸೆ ಸಂತ್ರಸ್ತರ ಸಮಸ್ಯೆ ಆಲಿಸಿ, ಅಕ್ಕಿ, ಎಣ್ಣೆ, ಕಾಳುಗಳು, ಹಾಸಿಗೆ ನೀಡಿದ್ರು. ಅಲ್ಲದೇ, ಸರ್ಕಾರ ಆದಷ್ಟು ಬೇಗ ಪರಿಹಾರ ನೀಡುತ್ತೆ ಎಂದು ಭರವಸೆ ಕೊಟ್ಟರು. ಈ ವೇಳೆ ಶಾಸಕ ಪ್ರಸಾದ ಅಬ್ಬಯ್ಯ ಡಿಕೆಶಿಗೆ ಸಾಥ್ ನೀಡಿದ್ರು.
ಬೆಳಗಾವಿ: ಡಿ.ಕೆ.ಶಿವಕುಮಾರ್ ಹುಬ್ಬಳ್ಳಿ ಪ್ರವಾಹಪೀಡಿತ ಪ್ರದೇಶಗಳ ಭೇಟಿ ಬಳಿಕ ಬೆಳಗಾವಿಗೆ ಆಗಮಿಸಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ್ರು.
ಜಿಲ್ಲೆಯ ಬೈಲಹೊಂಗಲ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಅಗತ್ಯ ವಸ್ತುಗಳನ್ನ ವಿತರಿಸಿದ್ರು.
ಬಳಿಕ ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ರು. ಈ ವೇಳೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಡಿಕೆಶಿಗೆ ಸಾಥ್ ನೀಡಿದ್ರು.