ಕರ್ನಾಟಕ

karnataka

ETV Bharat / state

ಇಂದು ರಾತ್ರಿ ಡಿಕೆಶಿ ಬೆಳಗಾವಿಗೆ ಭೇಟಿ: ನಾಳೆ ಸವದಿ, ಶೆಟ್ಟರ್​ ಭೇಟಿ ಮಾಡಲಿರುವ ಡಿಸಿಎಂ...! - ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಜಗದೀಶ ಶೆಟ್ಟರ್ ಸೋತಿದ್ದರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಲಕ್ಷ್ಮಣ ಸವದಿಗೆ ಸಹ ಈ ಬಾರಿ ಸಚಿವ ಸ್ಥಾನ ಖಚಿತ ಎನ್ನಲಾಗಿತ್ತು. ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರಿಂದ ಇಬ್ಬರ ನಾಯಕರ ಮನೆಗೆ ಡಿಸಿಎಂ ಡಿಕೆಶಿ ತೆರಳಿ ಮಾತುಕತೆ ನಡೆಸಲಿದ್ದಾರೆ.

DCM DK Shivakumar, Jagadish Shettar, Lakshmana Savadi
ಡಿಸಿಎಂ ಡಿ ಕೆ ಶಿವಕುಮಾರ್,ಜಗದೀಶ ಶೆಟ್ಟರ್ ,ಲಕ್ಷ್ಮಣ ಸವದಿ

By

Published : May 30, 2023, 9:03 PM IST

ಬೆಳಗಾವಿ:ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಭೇಟಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಇಂದು ರಾತ್ರಿ ಬೆಳಗಾವಿಗೆ ದೌಡಾಯಿಸಲಿದ್ದಾರೆ‌. ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಇಂದು ರಾತ್ರಿ 10 ಗಂಟೆಗೆ ವಿಶೇಷ ವಿಮಾನದಲ್ಲಿ 11.30ಕ್ಕೆ ಬೆಳಗಾವಿಗೆ ಬಂದು ವಾಸ್ತವ್ಯ ಹೂಡುವರು. ಬುಧವಾರ ಬೆಳಗ್ಗೆ 8 ಗಂಟೆಗೆ ಲಕ್ಷ್ಮಣ ಸವದಿ ಅವರ ಮನೆಗೆ ತೆರಳಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಸವದಿ - ಶೆಟ್ಟರ್ ಭೇಟಿ ಮಹತ್ವ:ಸವದಿ ಅವರ ಭೇಟಿ ಬಳಿಕ ಬೆಳಗ್ಗೆ 9 ಗಂಟೆಗೆ ಹುಬ್ಬಳ್ಳಿಗೆ ತೆರಳಿ ಜಗದೀಶ ಶೆಟ್ಟರ್ ಅವರನ್ನು ಭೇಟಿ ಮಾಡುವರು. ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು. ಇಬ್ಬರಿಗೂ ಸಚಿವಸ್ಥಾನ ಸಿಗದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಜಗದೀಶ ಶೆಟ್ಟರ್ ಸೋತಿದ್ದರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಲಕ್ಷ್ಮಣ ಸವದಿ ಸಹ ಈ ಬಾರಿ ಸಚಿವಸ್ಥಾನ ಖಚಿತ ಎಂದೇ ಭಾವಿಸಿದ್ದರು. ಆದರೆ ಇಬ್ಬರಿಗೂ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಹಾಗಾಗಿ ಇಬ್ಬರನ್ನೂ ಭೇಟಿಯಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಸಮಾಧಾನ ಪಡಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿವೆ.

ಕೊನೆಗಳಿಗೆಯಲ್ಲಿ ತಪ್ಪಿದ ಸಚಿವ ಸ್ಥಾನ:ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬದಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಸಚಿವರನ್ನಾಗಿ ನೇಮಕ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು.

ವೀರಶೈವ ಲಿಂಗಾಯತ ಸಮುದಾಯದಿಂದ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯ ಶಾಸಕರು ಸಚಿವ ಹುದ್ದೆಗಾಗಿ ಒತ್ತಡ ಹಾಕಿದ್ದರಿಂದ ಕೊನೆಗಳಿಗೆಯಲ್ಲಿ ಹೈ ಕಮಾಂಡ್​ ಮಟ್ಟದಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಹೆಸರನ್ನು ಕೈಬಿಡಲಾಯಿತು. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿ ಪಕ್ಷಕ್ಕೆ ಬಲ ತಂದುಕೊಟ್ಟಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಖಚಿತವೆಂದು ಹೇಳಲಾಗಿತ್ತು. ಸಚಿವ ಸ್ಥಾನದ ಕನಸು ಹುಸಿಯಾದ ತಕ್ಷಣ ಇಬ್ಬರು ನಾಯಕರು ಅಸಮಾಧಾನವನ್ನು ಹೊರ ಹಾಕಿದ್ದರು.

ಜಿದ್ದಾಜಿದ್ದಿಯಲ್ಲಿ ಗೆದ್ದು ಬಂದ ಲಕ್ಷ್ಮಣ ಸವದಿ:ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಚರ್ಚಿತ ಮತ್ತು ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರಗಳಲ್ಲಿ ಒಂದಾದ ಬೆಳಗಾವಿಯ ಅಥಣಿಯಲ್ಲಿ, ಸಚಿವ ರಮೇಶ್​ ಜಾರಕಿಹೊಳಿ ಅವರು ಮಹೇಶ್​ ಕುಮಟಳ್ಳಿಗೆ ಬಿಜೆಪಿಗೆ ಟಿಕೆಟ್​ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಬಿಜೆಪಿಯ ಕಟ್ಟಾಳು ಟಿಕೆಟ್​ ವಂಚಿತ ಸವದಿ ಪಕ್ಷಕ್ಕೆ ಗುಡ್​ಬೈ ಹೇಳಿ ಕಾಂಗ್ರೆಸ್​ ಸೇರಿದ್ದರು. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿತ್ತು. ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಥಣಿ ಕ್ಷೇತ್ರದಿಂದ ಮಹೇಶ್​ ಕುಮಟಳ್ಳಿ ವಿರುದ್ಧ ಸುಮಾರು 30 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದಿಂದ ಲಕ್ಷ್ಮಣ ಸವದಿ ಭರ್ಜರಿ ಜಯ ಸಾಧಿಸಿದ್ದರು.

ಇದನ್ನೂಓದಿ:ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ವಲಸಿಗರಿಗೆ ಒಲಿಯದ ಮಂತ್ರಿಭಾಗ್ಯ...!

ABOUT THE AUTHOR

...view details