ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಹರಿದ ನೆತ್ತರು.. ಹೊನಲು ಬೆಳಕಿನ ಕಬಡ್ಡಿ ಆಡುತ್ತಿದ್ದ ಇಬ್ಬರು ಯುವಕರ ಬರ್ಬರ ಕೊಲೆ - ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್ಆರ್‌ಪಿ ತುಕಡಿ ನಿಯೋಜನೆ

ಬೆಳಗಾವಿಯಲ್ಲಿ ಜೋಡಿ ಕೊಲೆ- ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಹತ್ಯೆ- ಹೊನಲು ಬೆಳಕಿನ ಕಬಡ್ಡಿ ಪಂದ್ಯದ ವೇಳೆ ಹರಿದ ನೆತ್ತರು

murder
ಬೆಳಗಾವಿ ಹೊರವಲಯದಲ್ಲಿ ಡಬಲ್ ಮರ್ಡರ್

By

Published : Dec 26, 2022, 8:33 AM IST

Updated : Dec 26, 2022, 9:12 AM IST

ಬೆಳಗಾವಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್ಆರ್‌ಪಿ ತುಕಡಿ ನಿಯೋಜನೆ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಹೊರ ವಲಯದಲ್ಲಿರುವ ಶಿಂದೊಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಬಸವರಾಜ್ ಬೆಳಗಾಂವ್ಕರ್ (22), ಗಿರೀಶ ನಾಗಣ್ಣವರ (22) ಹತ್ಯೆಯಾದವರು. ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಕಬಡ್ಡಿ ಆಡುತ್ತಿದ್ದ ವೇಳೆ ಈ ಬರ್ಬರ ಕೊಲೆ ನಡೆದಿದೆ.

ಘಟನೆ ವಿವರ: ಶಿಂದೊಳ್ಳಿ ಗ್ರಾಮದಲ್ಲಿ ತಡರಾತ್ರಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಆಟವಾಡುವ ಸಮಯದಲ್ಲಿ ಕೆಲವು ಅಪರಿಚಿತ ಕಿಡಿಗೇಡಿಗಳು ಮೈದಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಸ್ಥಳೀಯರು ಆಕ್ಷೇಪ ಪಡಿಸುತ್ತಿದ್ದಂತೆ ಬಸವರಾಜ್ ಬೆಳಗಾಂವ್ಕರ್, ಗಿರೀಶ ನಾಗಣ್ಣವರಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಮೃತದೇಹಗಳನ್ನು ಬಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿಸಿಪಿ ರವೀಂದ್ರ ಗಡಾಡಿ, ಎಸಿಪಿ ನಾರಾಯಣ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕೋರಮಂಗಲ ಡಬಲ್ ಮರ್ಡರ್ ಪ್ರಕರಣ: ಸಹೋದರರ ಸಹಿತ ಮೂವರು ಆರೋಪಿಗಳ ಬಂಧನ

Last Updated : Dec 26, 2022, 9:12 AM IST

ABOUT THE AUTHOR

...view details