ಕರ್ನಾಟಕ

karnataka

ETV Bharat / state

ಬೆಳಗಾವಿ: ಕುಡಿದ ಅಮಲಿನಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಂದ ಮಹಿಳೆ - ಈಟಿವಿ ಭಾರತ ಕನ್ನಡ

ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬರು ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

drunken-women-stabbed-and-killed-youth-in-belagavi
ಕುಡಿದ ಅಮಲಿನಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಂದ ಮಹಿಳೆ

By

Published : May 1, 2023, 4:33 PM IST

ಬೆಳಗಾವಿ : ಕುಡಿದ ಅಮಲಿನಲ್ಲಿ ಚಾಕು ಹಿಡಿದು ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಯುವಕನನ್ನು ಇರಿದು ಕೊಲೆ ಮಾಡಿರುವ ಘಟನೆ ನಗರದ ಹಳೆ ಪಿಬಿ ರಸ್ತೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ನಾಗರಾಜ ಭೀಮ ಸಿ ಪಾಟೀಲ್​(28) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಚಾಕು ಇರಿದ ಕಂಗ್ರಾಳಿ ಕೆ.ಎಚ್. ಗ್ರಾಮದ ಜಯಶ್ರೀ ಪವಾರ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಭಾನುವಾರ ತಡರಾತ್ರಿ ಮಹಿಳೆಯೊಬ್ಬರು ಕುಡಿದ ಅಮಲಿನಲ್ಲಿ ಕೈಯಲ್ಲಿ ಚಾಕು ಹಿಡಿದುಕೊಂಡು ರಸ್ತೆಯಲ್ಲಿ ಓಲಾಡುತ್ತಾ ಸಾಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ನಾಗರಾಜ ಆ ಮಹಿಳೆಯನ್ನು ವಿಚಾರಿಸಿದ್ದಾನೆ. ಈ ಸಂಬಂಧ ಕೆರಳಿದ ಮಹಿಳೆ ಯುವಕನೊಂದಿಗೆ ಜಗಳಕ್ಕೆ ನಿಂತಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಮಹಿಳೆ ಕುಡಿದ ಅಮಲಿನಲ್ಲಿ ಯುವಕನಿಗೆ ಚೂರಿಯಿಂದ ಚುಚ್ಚಿದ್ದಾರೆ.

ತಕ್ಷಣವೇ ಸ್ಥಳೀಯರು ನಾಗರಾಜ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಶಿವಮೊಗ್ಗದಲ್ಲಿ ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ABOUT THE AUTHOR

...view details