ಚಿಕ್ಕೋಡಿ:ಕೃಷ್ಣಾ ನದಿಗೆ ಅಡ್ಡಲಾಗಿರುವ ಕೊಯ್ನಾ ಡ್ಯಾಂ ಸುತ್ತ 20 ಕಿ.ಮೀ. ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿರುವ ಘಟನೆ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾಟಣ ತಾಲೂಕಿನ ಕೊಯ್ನಾ ಡ್ಯಾಂ ಬಳಿ ನಡೆದಿದೆ.
ಕೊಯ್ನಾ ಡ್ಯಾಂ ಬಳಿ ಭೂಕಂಪ: ರಾಜ್ಯದ ಗಡಿ ಗ್ರಾಮಗಳಲ್ಲಿ ಆತಂಕ
ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕೊಯ್ನಾ ಡ್ಯಾಂ ಸುತ್ತ 20 ಕಿ.ಮೀ. ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿರುವ ಘಟನೆ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾಟಣ ತಾಲೂಕಿನ ಕೊಯ್ನಾ ಡ್ಯಾಂ ಬಳಿ ನಡೆದಿದೆ.
ಕೊಯ್ನಾ ಡ್ಯಾಂ ಸುಮಾರು 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಆದರೆ ಗುರುವಾರ ರಾತ್ರಿ 9:30 ಕ್ಕೆ ಭೂಕಂಪನದ ಅನುಭವಾಗಿದೆ. ರಿಕ್ಟರ್ ಮಾಪನದಲ್ಲಿ ಸುಮಾರು 3.4ರಷ್ಟು ತೀವ್ರತೆ ದಾಖಲಾಗಿದೆ ಎಂದು ಮಹಾರಾಷ್ಟ್ರ ನೀರಾವರಿ ಇಲಾಖೆ ಭೂಕಂಪನ ಕುರಿತು ಮಾಹಿತಿ ನೀಡಿದೆ. ಕೊಯ್ನಾ ಡ್ಯಾಂಗೆ ಧಕ್ಕೆಯಾದರೆ ಕರ್ನಾಟಕ ರಾಜ್ಯಕ್ಕೆ ಅಪಾಯವಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಪ್ರವಾಹ ಭೀತಿ:
ಏಕಾಏಕಿ ಹೆಚ್ಚುವರಿ ನೀರು ಹರಿದು ಬಂದ್ರೆ ಕೃಷ್ಣಾ ನದಿ ತೀರದ ಹಲವು ಗ್ರಾಮ, ಪಟ್ಟಣಗಳಲ್ಲಿ ಪ್ರವಾಹ ಭೀತಿ ಎದುಗಲಿದೆ. ಮಹಾರಾಷ್ಟ್ರದ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭಾರಿ ಮಳೆ ಇರೋ ಕಾರಣದಿಂದ ಕೃಷ್ಣಾ ನದಿಗೆ ಇನ್ನೂ ಹೆಚ್ಚು ನೀರು ಹರಿಸುವ ಸಾಧ್ಯತೆಯಿದೆ. ಈಗಾಗಲೇ ನದಿ ತೀರದ ಗ್ರಾಮಗಳಿಗೆ ಚಿಕ್ಕೋಡಿ ವಿಭಾಗದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.