ಬೆಳಗಾವಿ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.
ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ಆರೋಪ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ಗೂ ಇಡಿ ನೋಟಿಸ್ - ಇಡಿ ನೋಟಿಸ್
ಮಾಜಿ ಸಚಿವ ಡಿ ಕೆ ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ವ್ಯವಹಾರ ನಡೆದಿದೆ ಎಂಬ ಆರೋಪ ಹಿನ್ನೆಲೆ ಸೆ.19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಗೆ ನೋಟಿಸ್ ಬಂದಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಸೆ.19 ರಂದು ಹಾಜರಾಗುವಂತೆ ಇಡಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಗೆ ನೋಟಿಸ್ ಬಂದಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಇಡಿ ವಶದಲ್ಲಿದ್ದಾರೆ. ಮಾಜಿ ಸಚಿವ ಡಿಕೆಶಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ನಡೆದಿದೆ ಎನ್ನಲಾದ ವ್ಯವಹಾರಿಕ ವಿಷಯಕ್ಕೆ ಸಂಬಂಧಿಸಿಂತೆ ಇಡಿಯವರು ಹೆಬ್ಬಾಳ್ಕರ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಇಡಿ ನೋಟಿಸ್ ಕಳಿಸಿರುವುದು ನಿಜವೆಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರಿಗೆ ದೃಢಪಡಿಸಿದ್ದಾರೆ.