ಅಥಣಿ:ಪ್ರವಾಹಕ್ಕೊಳಗಾದ ಅಥಣಿ ತಾಲೂಕಿನ ನದಿ ಇಂಗಳಗಾಂವ್ ಮತ್ತು ತೀರ್ಥ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು.
ಶಿಥಿಲಗೊಂಡ ಕೋಣೆಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸದಂತೆ ಅಧಿಕಾರಿಗಳಿಗೆ ಸೂಚಿಸಿದರು. ನದಿ ಇಂಗಳಗಾಂವ್ ತೋಟದ ವಸತಿ ಶಾಲೆಯ 3 ಕೊಠಡಿ ನೆಲಸಮಗೊಳಿಸಿ, ಹೆಚ್ಚುವರಿ ಶೆಡ್ ನಿರ್ಮಿಸಬೇಕು ಎಂದರು. ಅಲ್ಲದೆ, ಶೀಘ್ರದಲ್ಲೇ ಹೊಸ ಕಟ್ಟಡ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.