ಬೆಳಗಾವಿ:ಮಕ್ಕಳ ಜತೆಗೂಡಿ ಅಣ್ಣನೇ ಸ್ವಂತ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ನಡೆದಿದೆ.
ಆಸ್ತಿಗಾಗಿ ಅಣ್ಣನಿಂದಲೇ ಸ್ವಂತ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ..! - ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಣ್ಣ
ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಣ್ಣನೇ ಸ್ವಂತ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ನಡೆದಿದೆ.
![ಆಸ್ತಿಗಾಗಿ ಅಣ್ಣನಿಂದಲೇ ಸ್ವಂತ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ..! deddley-attack](https://etvbharatimages.akamaized.net/etvbharat/prod-images/768-512-5372126-thumbnail-3x2-chai.jpg)
ರಾಮಚಂದ್ರ ದೇಸಾಯಿ(55) ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ರಾಮಚಂದ್ರನ ಮೇಲೆ ಅಣ್ಣ ರುದ್ರಪ್ಪ ದೇಸಾಯಿ ಮಕ್ಕಳಾದ ನಾಗೇಶ್, ಮಹೇಶ್ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ.ಗಂಭೀರವಾಗಿ ಗಾಯಗೊಂಡಿರುವ ರಾಮಚಂದ್ರ ದೇಸಾಯಿ ಅವರನ್ನು ಕಿತ್ತೂರಿನ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಿತ್ತೂರು ಠಾಣೆ ಪೊಲೀಸರು ಆರೋಪಿ ರುದ್ರಪ್ಪಾ ದೇಸಾಯಿಯನ್ನು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
Belagavi latest crime news