ಬೆಳಗಾವಿ:ಈ ಬಾರಿ ವಿಧಾನಸಭೆ ಚುನಾವಣೆ ಹಿನ್ನೆಲೆ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಾಗಿದೆ. ಪ್ರಚಾರಕ್ಕೆ ವಿಶೇಷ ವಾಹನವನ್ನು ತಯಾರಿಸಲಾಗಿದ್ದು, ನಾಲ್ಕು ಐದು ದಿನದಲ್ಲಿ ಸ್ಮಶಾನದಲ್ಲಿ ವಾಹನ ಪೂಜೆ ಸಲ್ಲಿಸಿ ಚುನಾವಣಾ ಕಣಕ್ಕೆ ಇಳಿಯಲಾಗುವುದು ಮತ್ತು ರಾಹು ಕಾಲದಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಅವರಿಂದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘‘ನಾವು ಹೆಚ್ಚು ಮೌಢ್ಯಕ್ಕೆ ಒತ್ತು ನೀಡುವುದಿಲ್ಲ. ಬಸವ ತತ್ವ, ಅಂಬೇಡ್ಕರ್, ಬುದ್ಧನ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮೌಢ್ಯಕ್ಕೆ ಸೆಡ್ಡು ಹೊಡೆದು ಹಲವು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಅದರಂತೆ ನಾಳೆ ಕೂಡ ಚುನಾವಣಾ ಪ್ರಚಾರದ ವಾಹನಕ್ಕೆ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ರಾಹು ಕಾಲದಲ್ಲಿ ನಾಮಪತ್ರ ಸಲ್ಲಿಸಲಾಗುವುದೆಂದು’’ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ 10 ಅಧಿಕ ಸ್ಥಾನ ಗೆಲ್ಲುತ್ತೇವೆ, 12 ಸ್ಥಾನ ಗೆಲ್ಲಬೇಕು ಎಂಬ ಟಾರ್ಗೆಟ್ ಇದೆ. ಕೆಲವು ಕಡೆ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿಯೇ ಮಾಡ್ತಾರೆ, ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ನಾವು ಏನೂ ಮಾಡಲು ಸಾಧ್ಯವಿಲ್ಲ, ಅವರೊಂದಿಗೆ ಸಂಧಾನ ಮಾಡುವ ಕಾರ್ಯ ರಾಜ್ಯಮಟ್ಟದಲ್ಲಿ ನಡೆಯುತ್ತಿದೆ. ರಾಯಬಾಗ, ಸವದತ್ತಿ, ಕಿತ್ತೂರು, ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಗೊಂದಲ ಇದ್ದು, ಇಂದು ಸಂಧಾನ ಮಾಡ್ತಿದೀವಿ ಎಂದು ಹೇಳಿದರು.
ಬಿಜೆಪಿ ಎಂಎಲ್‌ಸಿ ಕಾಂಗ್ರೆಸ್ ಹೋಗ್ತಾರೆ ಎಂಬ ಊಹಾಪೋಹ ವಿಚಾರ- ಜಾರಕಿಹೊಳಿ:ಬಿಜೆಪಿ ವಿಧಾನ ಪರಿಷತ್ ಸದಸ್ಯಲಕ್ಷ್ಮಣ ಸವದಿಯವರು ಜಿಲ್ಲಾ, ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಲ್ಲಿಯೂ ಅಪ್ರೋಚ್ ಆಗಿಲ್ಲಾ, ನಮ್ಮಲ್ಲಿ 10 ಜನ ಆಕಾಂಕ್ಷಿಗಳು ಸಮರ್ಥ ಇದ್ದಾರೆ ಎಂದ ಸತೀಶ್ ಜಾರಕಿಹೊಳಿ ಹೇಳಿದರು.