ಕರ್ನಾಟಕ

karnataka

ETV Bharat / state

ಚಿದಂಬರಂ, ಡಿಕೆಶಿ ಪ್ರಶ್ನೆ ಅಲ್ಲ, ಭ್ರಷ್ಟರೆಲ್ಲರೂ ಜೈಲಿಗೆ ಹೋಗ್ಬೇಕು.. ಈಶ್ವರಪ್ಪ‌ ಗುಡುಗು - ಡಿ ಕೆ ಶಿವಕುಮಾರ ಬಂಧನ

ಡಿಕೆಶಿ ಅಷ್ಟೇ ಅಲ್ಲ ಭ್ರಷ್ಟರು, ಕೊಲೆಗಡುಕರು, ಗೂಂಡಾಗಳಿಗೆ ತಕ್ಕ ಶಾಸ್ತಿ ಆಗಬೇಕು. ಇದು ಮೊದಲಿನಿಂದಲೂ ಬಿಜೆಪಿ ನಿಲುವು . ಇಡಿ, ಸಿಬಿಐ ಸೇರಿದಂತೆ ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿವೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೆಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ

By

Published : Sep 7, 2019, 3:14 PM IST

ಬೆಳಗಾವಿ:ಕಾಂಗ್ರೆಸ್ಸಿನ ಪಿ.ಚಿದಂಬರಂ, ಮಾಜಿ‌ ಸಚಿವ ಡಿ ಕೆ ಶಿವಕುಮಾರ ಪ್ರಶ್ನೆ ಅಲ್ಲ.ಭ್ರಷ್ಟರು, ಕೊಲೆಗಡುಕರು, ಗೂಂಡಾಗಳೆಲ್ಲರೂ ಜೈಲು ಸೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ ಎಸ್ ಈಶ್ವರಪ್ಪ ಗುಡುಗಿದ್ದಾರೆ.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಬಂಧನ ರಾಜಕೀಯ ಪ್ರೇರಿತ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಅವರು ತಿರುಗೇಟು ನೀಡಿದರು. ಭ್ರಷ್ಟರು, ಕೊಲೆಗಡುಕರು, ಗೂಂಡಾಗಳಿಗೆ ತಕ್ಕ ಶಾಸ್ತಿ ಆಗಬೇಕು. ಮೊದಲಿನಿಂದಲೂ ಬಿಜೆಪಿ ನಿಲುವು ಇದೆ ಆಗಿದೆ. ಇಡಿ, ಸಿಬಿಐ ಸೇರಿದಂತೆ ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿವೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ ಎಸ್ ಈಶ್ವರಪ್ಪ..

ದೇಶದಲ್ಲಿ 18 ರಾಜ್ಯಗಳು ನೆರೆಯಿಂದ ತತ್ತರಿಸಿವೆ. ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ‌. ಎಲ್ಲಾ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪರಿಹಾರ ಬಿಡುಗಡೆಗೊಳಿಸುವ ನಿರೀಕ್ಷೆ ಇದೆ ಎಂದರು.

ಕೇಂದ್ರ ನೆರೆ ಸಂತ್ರಸ್ತರಿಗೆ ಬಿಡಿಗಾಸು ಪರಿಹಾರ ನೀಡಿಲ್ಲ. ಸಂತ್ತಸ್ತರಿಗಾಗಿ ಬೆಂಗಳೂರಿನಲ್ಲೇ ಭಿಕ್ಷೆ ಬೇಡುತ್ತೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿ, ಹೆಬ್ಬಾಳ್ಕರ್ ನನ್ನ ಸಹೋದರಿ ಇದ್ದಂತೆ. ಅವರು ಭಿಕ್ಷೆ ಬೇಡುವ ಅಗತ್ಯವಿಲ್ಲ. ಕೇಂದ್ರದಿಂದ ಕರ್ನಾಟಕಕ್ಕೆ ಹೆಚ್ಚಿನ ಪರಿಹಾರ ಸಿಗಲಿದೆ. ಸಂತ್ರಸ್ತರ ಸಂಕಷ್ಟ ಆಲಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

ನನ್ನ ಜೀವನದಲ್ಲೇ ಇಂಥದ್ದೊಂದು ಜಲಪ್ರಳಯ ಕಂಡಿಲ್ಲ. ಎರಡು ಹಂತದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುತ್ತಿದೆ. ತಾತ್ಕಾಲಿಕವಾಗಿ 10 ಸಾವಿರ ರೂ. ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಸಂತ್ರಸ್ತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details