ಅಥಣಿ:ಕೊರೊನಾ ಸಂಕಷ್ಟದ ಸಮಯದಲ್ಲಿ ಕರ್ತವ್ಯ ಪಾಲನೆ ಮಾಡಿದ ತಾಲೂಕಿನ 456 ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನವನ್ನು ಅಥಣಿ ತಾಲೂಕಿನ ಸಹಕಾರಿ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳ ಮೂಲಕ ನೀಡಲಾಯಿತು.
ಈ ವೇಳೆ ಮಾತನಾಡಿದ ಮಹಿಳಾ ಕೋ-ಆಪರೇಟಿವ್ ಸಹ ಕಾರ್ಯದರ್ಶಿ ಮುರುಗೇಶ ಬಾನೆ, ಸರ್ಕಾರ ಕೊಡುವ ಅಲ್ಪ ಗೌರವ ಧನದಲ್ಲಿಯೇ ಬದುಕು ಸಾಗಿಸುವ ಆಶಾ ಕಾರ್ಯಕರ್ತರು, ತಮ್ಮ ಜೀವನ ಸಾಗಿಸಲು ಕಷ್ಟ ಪಡುತ್ತಿದ್ದಾರೆ. ಆದ್ದರಿಂದ ಕೊರೊನಾ ವಾರಿಯರ್ಸ್ಗೆ ಸಹಕಾರಿಗಳ ಸಲಾಂ ತತ್ವದ ಅಡಿಯಲ್ಲಿ ಇಂದು ಹಲ್ಯಾಳ, ಸಂಕೋನಟ್ಟಿ, ಅನಂತಪುರ ಮತ್ತು ಶಂಬರಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ನಿರ್ದೇಶನದ ಮೇರೆಗೆ ಪ್ರೋತ್ಸಾಹ ಧನ ವಿತರಣೆ ಮಾಡುತ್ತಿದ್ದೇವೆ ಎಂದರು.